ಪಿ ಚಿದಂಬರಂಗೆ ಎಲ್ಲಾ ಬಾಗಿಲು ಬಂದ್, ಸುಪ್ರೀಂನಿಂದ ರಿಲೀಫ್ ಇಲ್ಲ
Recommended Video
ನವದೆಹಲಿ, ಆಗಸ್ಟ್ 21: ಕೇಂದ್ರದ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂಗೆ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಈಗ ಬಂಧನ ಭೀತಿ ಶುರುವಾಗಿದೆ. ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ, ವಿಮಾನ ಖರೀದಿ ಅವ್ಯವಹಾರದಲ್ಲಿಕೂಡಾ ಸಿಲುಕಿದ್ದಾರೆ. ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಬಾಗಿಲು ತಟ್ಟಿದ್ದ ಚಿದಂಬರಂಗೆ ಹಿನ್ನಡೆಯಾಗಿದೆ.
ಮನಿಲಾಂಡ್ರಿಂಗ್ ಹಾಗೂ ಭ್ರಷ್ಟಾಚಾರ ಕೇಸಿಗೆ ಸಂಬಂಧಿಸಿದಂತೆ ಬಂಧನದಿಂದ ರಕ್ಷಣೆ ಕೋರಿ ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಜಸ್ಟೀಸ್ ಸುನೀಲ್ ಗೌರ್ ಅವರು ಆಗಸ್ಟ್ 20ರಂದು ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಚಿದಂಬರಂ ಪರ ವಕೀಲ ಸಲ್ಮಾನ್ ಖುರ್ಷಿದ್ ಮೇಲ್ಮನವಿ ಸಲ್ಲಿಸಿದರೂ ಫಲ ಸಿಕ್ಕಿಲ್ಲ, ಅಯೋಧ್ಯಾ ಭೂ ವಿವಾದ ವಿಚಾರಣೆ ಪ್ರತಿದಿನ ನಡೆಯುತ್ತಿರುವುದರಿಂದ ಬೇರೆ ಯಾವುದೇ ಪ್ರಕರಣವನ್ನು ಸಿಜೆಐ ರಂಜನ್ ಗೊಗಾಯ್ ಅವರಿರುವ ನ್ಯಾಯಪೀಠ ಕೈಗೆತ್ತಿಕೊಳ್ಳುತ್ತಿಲ್ಲ. ಚಿದಂಬರಂ ಅವರ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸುಪ್ರೀಂ ನಿರಾಕರಿಸಿದೆ.
ಇನ್ನೊಂದೆಡೆ, ಸಿಬಿಐ ನಂತರ ಜಾರಿ ನಿರ್ದೇಶನಾಲಯದಿಂದಲೂ ಪಿ ಚಿದಂಬರಂ ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿಗೊಳಿಸಲಾಗಿದೆ. ಚಿದಂಬರಂ ಅವರ ಮನೆಗೆ ಕಳೆದ ರಾತ್ರಿ ಭೇಟಿ ನೀಡಿದ್ದ ಸಿಬಿಐ ತಂಡ, ಬರಿಗೈಯಲ್ಲಿ ವಾಪಸ್ ಆಗಿತ್ತು.
Delhi: Central Bureau of Investigation (CBI) has put up a notice outside the residence of P Chidambaram to appear before them in the next two hours. Earlier today, Delhi High Court had dismissed his both anticipatory bail pleas in connection with INX Media case. pic.twitter.com/IeEI5IkvGF
— ANI (@ANI) August 20, 2019
ಇಂದು ಬೆಳಗ್ಗೆ ಮನೆಗೆ ತೆರಳಿ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ. ಚಿದಂಬರಂ ಅವರ ಫೋನ್ ಟ್ರೇಸ್ ಮಾಡಲಾಗುತ್ತಿದ್ದು, ದೆಹಲಿ ಲೋಧಾರಸ್ತೆಯಲ್ಲಿ ಕೊನೆಯ ಬಾರಿಗೆ ಪತ್ತೆಯಾಗಿದೆ. ಸದ್ಯಕ್ಕೆ ಚಿದಂಬರಂ ಅವರ ಇರುವಿಕೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

ಏನಿದು ಪ್ರಕರಣ?: ಯುಪಿಎ 1 ಅಧಿಕಾರದಲ್ಲಿದ್ದಾಗ ವಿತ್ತ ಸಚಿವರಾಗಿದ್ದ ಪಿ ಚಿದಂಬರಂ ಅವರು 2007ರಲ್ಲಿ ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ಸುಮಾರು 305 ಕೋಟಿ ರುಗಳನ್ನು ವಿದೇಶದಿಂದ ಹೂಡಿಕೆ ರೂಪದಲ್ಲಿ ಪಡೆಯಲು ಅನುಮತಿ ದೊರಕಿಸಿಕೊಟ್ಟಿದ್ದರು.
2007ರಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (Foreign Investment Promotion Board)ಯಿಂದ 4.62 ಕೋಟಿ ರುಪಾಯಿ ಹೂಡಿಕೆ ಮಾಡಲು ಅನುಮೋದನೆ ಸಿಕ್ಕಿತ್ತು. ಆದರೆ ಮಾರಿಷಸ್ ನ ಎರಡು ಕಂಪನಿಗಳಿಂದ ಪೀಟರ್ ಮತ್ತು ಇಂದ್ರಾಣಿ ಒಡೆತನದ ಕಂಪನಿ ಐಎನ್ಎಕ್ಸ್ ಮೀಡಿಯಾ ಪಡೆದದ್ದು 305 ಕೋಟಿ ರುಪಾಯಿಗಳು. ಇದರ ವಿರುದ್ಧ ಕಂದಾಯ ಇಲಾಖೆ ವಿಚಾರಣೆಗೆ ಆದೇಶಿಸಿತ್ತು. ಈ ವಿಚಾರಣೆಯನ್ನು ತಪ್ಪಿಸಲು ಕಾರ್ತಿ ಅವರು ತಮ್ಮ ಕಂಪನಿಯ ಮೂಲಕ ಐಎನ್ಎಕ್ಸ್ ಮೀಡಿಯಾ ಕಂಪನಿಯಿಂದ 10 ಲಕ್ಷ ರುಪಾಯಿ ಕಮಿಷನ್ ಪಡೆದಿದ್ದರು.












Click it and Unblock the Notifications