ಸಿಬಿಐ ನೂತನ ನಿರ್ದೇಶಕರಾಗಿ ರಿಷಿ ಕುಮಾರ್ ಶುಕ್ಲಾ ಅಧಿಕಾರ ಸ್ವೀಕಾರ

ನವದೆಹಲಿ, ಫೆಬ್ರವರಿ 04: ಕೇಂದ್ರ ತನಿಖಾ ದಳ(ಸಿಬಿಐ)ದ ನೂತನ ನಿರ್ದೇಶಕರಾಗಿ ನೇಮಕಗೊಂಡ ಐಪಿಎಸ್ ಅಧಿಕಾರಿ ರಿಷಿ ಕುಮಾರ್ ಶುಕ್ಲಾ ಅವರು ಅಧಿಕೃತವಾಗಿ ಇಂದು(ಫೆ.4) ಅಧಿಕಾರ ಸ್ವೀಕರಿಸಿದ್ದಾರೆ.

ಮಧ್ಯಪ್ರದೇಶದ ಮಾಜಿ ಪೊಲೀಸ್ ಮುಖ್ಯಸ್ಥ ರಿಷಿ ಕುಮಾರ್ ಶುಕ್ಲಾ, ಅವರನ್ನು ಶನಿವಾರ ಸಿಬಿಐ ಮುಖ್ಯಸ್ಥರನ್ನಾಗಿ ಆಯ್ಕೆ ನೇಮಕ ಮಾಡಲಾಗಿತ್ತು.

ಇಂದಿನಿಂದಿ ಎರಡು ವರ್ಷಗಳ ಕಾಲ ಅವರ ಅಧಿಕಾರಾವಧಿ ಇರಲಿದ್ದು, ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ಆಯ್ಕೆ ಮಾಡುವ ಮೊದಲು, ಅವರು ಮಧ್ಯಪ್ರದೇಶದ ಪೊಲೀಸ್ ಮಹಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.

IPS officer Rishi Kumar Shukla takes charge as new CBI director

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕಡ್ಡಾಯ ರಜೆಯ ಮೇಲೆ ತೆರಳಿದ್ದ ಸಿಬಿಐನ ನಿಕಟಪೂರ್ವ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಜನವರಿ 10 ರಿಂದ ಹುದ್ದೆಯಿಂದ ತೆಳಗಿಳಿಸಲಾಗಿತ್ತು. ಅವರ ಜಾಗಕ್ಕೆ ಹಂಗಾಮಿ ನಿರ್ದೇಶಕರಾಗಿ ತೆಲಂಗಾಣ ಮೂಲದ ನಾಗೇಶ್ವರ್ ರಾವ್ ಆಯ್ಕೆಯಾಗಿದ್ದರು.

ಇದೀಗ ಅಧಿಕೃತವಾಗಿ ರಿಷಿ ಕುಮಾರ್ ಶುಕ್ಲಾ ಅವರನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎದ್ದರುವ ಪೊಲೀಸ್ ಕಮಿಷನರ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸಿಬಿಐ ನಡುವಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ಸಾಕಷ್ಟು ಚರ್ಚೆಗೊಳಗಾಗುತ್ತಿದ್ದು, ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಶುಕ್ಲಾ ಅವರಿಗೆ ಸವಾಲು ಎದುರಾದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+