ಕಲ್ಬುರ್ಗಿ, ಗೌರಿ ಹತ್ಯೆಗೆ ಸಾಮ್ಯತೆ ಇದೆಯೇ? ಸಿಬಿಐಗೆ ಸುಪ್ರೀಂ ಪ್ರಶ್ನೆ
ನವದೆಹಲಿ, ಡಿಸೆಂಬರ್ 11: ಖ್ಯಾತ ಸಂಶೋಧಕ ಎಂಎಂ ಕಲ್ಬುರ್ಗಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಾಮ್ಯತೆ ಇದೆಯೇ? ಇಬ್ಬರನ್ನೂ ಕೊಲೆ ಮಾಡಿರುವುದು ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ್ ಪನ್ಸಾರೆಯೇ? ಎಂದು ಉತ್ತರ ನೀಡುವಂತೆ ಸಿಬಿಐಗೆ ಸುಪ್ರೀಂಕೋರ್ಟ್ ಪ್ರಶ್ನೆಯೊಂದನ್ನು ಮುಂದಿಟ್ಟಿದೆ.
ಗೌರಿ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳೇ ಕಲ್ಬುರ್ಗಿ ಅವರ ಹತ್ಯೆಯಲ್ಲೂ ಪಾಲ್ಗೊಂಡಿದ್ದಾರೆ ಎಂದು ಎಸ್‌ಐಟಿಗೆ ಸುಳಿವು ಸಿಕ್ಕಿದ್ದು, ತನಿಖೆ ನಡೆಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು ಈ ವಿಚಾರ ಕುರಿತಾಗಿ ಸುಪ್ರೀಂಕೋರ್ಟ್ ಸಿಬಿಐಗೆ ಮಾಹಿತಿ ನೀಡುವಂತೆ ಕೇಳಿದೆ.
ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ 2015ರ ಆಗಸ್ಟ್ 30ರಂದು ಎಂ.ಎಂ.ಕಲಬುರ್ಗಿ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಮೂರು ವರ್ಷಗಳು ಕಳೆದರೂ ಹಂತಕರನ್ನು ಇನ್ನೂ ಬಂಧಿಸಲಾಗಿಲ್ಲ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ನಡುವೆ ಹಲವು ಸಾಮ್ಯತೆ ಇದೆ ಎಂದು ಹೇಳಿದ್ದರು. ಬಳಸಿದ ಪಿಸ್ತೂಲ್, ಬೈಕ್‌ನಲ್ಲಿ ಬಂದ ರೀತಿ, ಹತ್ಯೆಗೆ ಹಾಕಿದ ಸ್ಕೆಚ್ ಎಲ್ಲದರ ನಡುವೆ ಸಾಮ್ಯತೆ ಇತ್ತು. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಮೋಲ್ ಕಾಳೆ, ಅಮಿತ್ ದೆಗ್ವೇಕರ್, ರಾಜೇಶ್ ಬಂಗೇರ ಸೇರಿದಂತೆ 11 ಆರೋಪಿಗಳನ್ನು ಬಂಧಿಸಿದೆ. ಬಂಧಿತರ ವಿಚಾರಣೆ ನಡೆಸುವಾಗ ಕಲಬುರ್ಗಿ ಹತ್ಯೆ ಪ್ರಕರಣದ ವಿವರ ಲಭ್ಯವಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5ರಂದು ರಾಜರಾಜೇಶ್ವರಿನಗರದಲ್ಲಿರುವ ಅವರ ನಿವಾಸದ ಮುಂದೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಇದೀಗ ಅವರ ಹತ್ಯೆಗೆ ಒಂದು ವರ್ಷ ಮುಗಿಯುತ್ತಾ ಬಂದರೂ ತನಿಖೆ ಸಂಪೂರ್ಣವಾಗಿ ಮುಕ್ತಾಯಗೊಂಡು ಆರೋಪಿಗಳು ಇವರೇ ಎಂದು ಸಾಬೀತು ಮಾಡಲು ಸಾಧ್ಯವಾಗಲ್ಲ. ಈಗಾಗೇ ನರೇಂದ್ರ ದಾಭೋಲ್ಕರ್ ಹಾಗೂ ಗೋಂವಿಂದ್ ಪನ್ಸಾರೆಯನ್ನು ಬಂಧಿಸಲಾಗಿದ್ದು ತನಿಖೆ ಮುಂದುವರೆದಿದೆ.












Click it and Unblock the Notifications