ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಪರಮಾಪ್ತ ಜಿತಿನ್ ಪ್ರಸಾದ ಬಿಜೆಪಿ ಸೇರುತ್ತಾರೆಯೇ?

|
Google Oneindia Kannada News

ನವದೆಹಲಿ, ಮಾರ್ಚ್ 22: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ಜಿತಿನ್ ಪ್ರಸಾದ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ವದಂತಿ ಹಬ್ಬಿದೆ.

45 ವರ್ಷ ವಯಸ್ಸಿನ ಜಿತಿನ್ ಪ್ರಸಾದ ಮತ್ತು ಟಾಮ್ ವಡಕ್ಕನ್ ಇಬ್ಬರು ಕಾಂಗ್ರೆಸ್ ಮುಖಂಡರು ಪುಲ್ವಾಮಾ ಘಟನೆಯ ನಂತರ ಕಾಂಗ್ರೆಸ್ ನಿಲುವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ವಡಕ್ಕನ್ ಇತ್ತೀಚೆಗಷ್ಟೇ ಬಿಜೆಪಿಗೆ ಸೇರುವ ಮೂಲಕ ಕಾಂಗ್ರೆಸ್ಸಿಗೆ ಆಘಾತ ನೀಡಿದ್ದರು. ಇದೀಗ ಜಿತಿನ್ ಪ್ರಸಾದ ಅವರೂ ಬಿಜೆಪಿ ಸೇರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್ಸಿಗೆ ಗುಡ್ ಬೈ ಹೇಳಿದ ಸೋನಿಯಾ ಆಪ್ತ ವಲಯದ ಟಾಮ್ಕಾಂಗ್ರೆಸ್ಸಿಗೆ ಗುಡ್ ಬೈ ಹೇಳಿದ ಸೋನಿಯಾ ಆಪ್ತ ವಲಯದ ಟಾಮ್

ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ಜಿತಿನ್ ಪ್ರಸಾದ, ತಾವು ಬಿಜೆಪಿ ಸೇರುತ್ತೇನೆ ಎಂಬ ವದಂತಿ ಸುಳ್ಳು. ಇಂಥ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ, ಇಂಥ ಪ್ರಶ್ನೆಗಳನ್ನು ಕೇಳಬೇಡಿ ಎಂದು ಪತ್ರಕರ್ತರಿಗೆ ಖಡಕ್ಕಾಗಿ ಹೇಳಿದರು.

Is Senior Congressman and Rahul Gandhis close aid Jitin Prasada joining bJp?

ರಾಹುಲ್ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಜಿತಿನ್ 2004 ಮತ್ತು 2009 ರ ಲೋಕಸಭಾ ಚುನಾವಣೆಗಳಲ್ಲಿ ಕ್ರಮವಾಗಿ ಶಹಝಾನ್ ಪುರ ಮತ್ತು ಧೌರಾಹ್ರಾ ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿದು ಗೆದ್ದಿದ್ದರು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಪೆಟ್ರೋಲಿಯಂ ಮತ್ತು ಜೈವಿಕ ಇಂಧನ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಮಾನವ ಸಂಪನ್ಮೂಲ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

2000 ನೇ ಇಸವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಸೋನಿಯಾ ಗಾಂಧಿ ಅವರ ವಿರುದ್ಧ ಸೆಣೆಸಿ ಸೋತಿದ್ದರು.

English summary
Congress president Rahul Gandhi's close aid, senior Congress leader Jitin Prasad likely to join BJP. He somehow denied the rumours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X