ದೆಹಲಿಯಲ್ಲಿ ಗುಂಡಿನ ಚಕಮಕಿ: ಐಸಿಸ್ ಉಗ್ರನ ಬಂಧನ
ನವದೆಹಲಿ, ಆಗಸ್ಟ್ 22: ದೆಹಲಿ ಪೊಲೀಸ್ ವಿಶೇಷ ಘಟಕವು ದೆಹಲಿಯ ದೌಲಾ ಕುವಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈ ಬಂಧನಕ್ಕೂ ಮುನ್ನ ಪೊಲೀಸರು ಮತ್ತು ಉಗ್ರನ ನಡುವೆ ಕೆಲ ಸಮಯ ಗುಂಡಿನ ಚಕಮಕಿ ನಡೆದಿದೆ.
ಶುಕ್ರವಾರ ರಾತ್ರಿ ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಉಗ್ರನಿಂದ ಸುಧಾರಿತ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಐಸಿಸ್ ಉಗ್ರನನ್ನು ಅಬ್ದುಲ್ ಯೂಸುಫ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿರಿ ದಾಳಿಗಳನ್ನು ನಡೆಸಲು ಹೊಂಚು ಹಾಕುತ್ತಿದ್ದ ಪ್ರಮುಖ ಸಂಚುಕೋರ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮ ವಿಶೇಷ ಘಟಕವು ದೌಲಾ ಕುವಾನ್ನಲ್ಲಿ ಗುಂಡಿನ ಚಕಮಕಿ ನಡೆಸಿದ ಬಳಿಕ ಒಬ್ಬ ಐಸಿಸ್ ಉಗ್ರನನ್ನು ಬಂಧಿಸಿದೆ. ಆತನಿಂದ ಐಇಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.

ಕರೋಲ್ ಬಾಗ್ ಮತ್ತು ದೌಲಾ ಕುವಾನ್ ಪ್ರದೇಶಗಳಲ್ಲಿ ಗುಂಡಿನ ಕಾಳಗ ನಡೆದಿದೆ. ಬಂಧಿತ ಉಗ್ರ ಅಬ್ದುಲ್ ಯೂಸುಫ್ ದೆಹಲಿಯ ಕೆಲವು ಸಹಚರರೊಂದಿಗೆ ನಂಟು ಹೊಂದಿದ್ದು, ಅವರು ಆತನಿಗೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದರು. ಆತನ ಸಹವರ್ತಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆತನಿಂದ ವಶಪಡಿಸಿಕೊಂಡ ಸುಧಾರಿತ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications