ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಸ್ಥಾನವನ್ನು ತುಂಬುವುದು ಕಷ್ಟ: ಸಲ್ಮಾನ್ ಖುರ್ಷಿದ್

ನವದೆಹಲಿ, ಜೂನ್ 3: ರಾಹುಲ್ ಗಾಂಧಿ ಅವರ ಸ್ಥಾನವನ್ನು ತುಂಬುವುದು ಕಷ್ಟವಾದ್ದರಿಂದ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಸೋಮವಾರ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಸೋಲಿನ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಮುಂದುವರಿಯುವುದು ಒಂದೇ ಈಗಿನ ಆಯ್ಕೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ನಾನು ಖಂಡಿತಾ ಹಾಗೆ ಯೋಚಿಸುತ್ತೇನೆ. ರಾಹುಲ್ ಗಾಂಧಿ ಅವರನ್ನು ಬಿಟ್ಟುಕೊಡುವುದು ಕಾಂಗ್ರೆಸ್ ಗೆ ಸಾಧ್ಯವಿಲ್ಲ. ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವುದಿಲ್ಲ ಎಂಬ ವಿಚಾರದಲ್ಲಿ ರಾಹುಲ್ ದೃಢವಾಗಿದ್ದಾರೆ. ಆದರೆ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ ಎಂದಿದ್ದಾರೆ.

It is difficult to replace Rahul Gandhi in Congress, says Salman Khurshid

ಗಾಂಧಿ ಕುಟುಂಬದ ಆಶಯವನ್ನು ನಾನು ಗೌರವಿಸುತ್ತೇನೆ. ಅದೇ ವೇಳೆ ಪಕ್ಷದ ನಾಯಕರು, ಅನುಯಾಯಿಗಳು ಏನು ಭಾವಿಸುತ್ತಾರೋ ಅದಕ್ಕೂ ಅವರು ಅದೇ ರೀತಿ ಗೌರವ ನೀಡುತ್ತಾರೆ ಎಂದು ಭಾವಿಸುತ್ತೇನೆ. ಈ ನಿರ್ಧಾರ ಬಹಳ ಕಷ್ಟ ಎಂಬುದು ನಮಗೂ ಅರ್ಥ ಆಗುತ್ತದೆ. ಅವರು ಅಧ್ಯಕ್ಷ ಸ್ಥಾನದಲ್ಲೇ ಉಳಿದರೆ ಎಲ್ಲ ಸಮಸ್ಯೆಗಳಿಗೂ ನಾವು ಪರಿಹಾರ ಕಂಡುಕೊಳ್ಳುತ್ತೇವೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.

ನೆಹರೂ-ಗಾಂಧಿ ಕುಟುಂಬವು ಕಾಂಗ್ರೆಸ್ ನ ಅತಿ ದೊಡ್ಡ ಶಕ್ತಿ. ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ಮತಗಳನ್ನು ಸೆಳೆಯುವ ಶಕ್ತಿ ಆ ಕುಟುಂಬಕ್ಕೆ ಇದೆ ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+