ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ

|
Google Oneindia Kannada News

ನವದೆಹಲಿ, ಡಿಸೆಂಬರ್ 12: ರಾಜ್ಯಸಭೆಯಲ್ಲಿ ಗುರುವಾರ ಅಂಗೀಕಾರವಾದ ಪೌರತ್ವ ತಿದ್ದುಪಡಿ ಮಸೂದೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ಈ ಮಸೂದೆಯನ್ನು ಅಕ್ರಮ ಎಂದು ಘೋಷಿಸುವಂತೆ ರಾಜಕೀಯ ಪಕ್ಷ ದಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ್ಯಾಯಾಲಯಕ್ಕೆ ಗುರುವಾರ ಮನವಿ ಮಾಡಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವ ಮೂಲಕ ಈ ಮಸೂದೆಯು ಸಂವಿಧಾನವನ್ನು ಉಲ್ಲಂಘಿಸುತ್ತಿದೆ ಎಂದು ಐಯುಎಂಎಲ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಿದೆ.

ದಾಖಲೆಗಳನ್ನು ಪರಿಶೀಲಿಸಿಕೊಳ್ಳಿ: ಮುಸ್ಲಿಮರಿಗೆ ಮಸೀದಿಗಳಲ್ಲಿ ಪ್ರಕಟಣೆದಾಖಲೆಗಳನ್ನು ಪರಿಶೀಲಿಸಿಕೊಳ್ಳಿ: ಮುಸ್ಲಿಮರಿಗೆ ಮಸೀದಿಗಳಲ್ಲಿ ಪ್ರಕಟಣೆ

ವಿವಿಧ ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು, ಧಾರ್ಮಿಕ ಸಂಘಟನೆಗಳ ವಿರೋಧಗಳ ನಡುವೆಯೇ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲಿಯೂ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆ ರೂಪ ತಾಳಲಿದೆ.

IUML Challenged Citizenship Amendment Bill In Supreme Court

ಕಾನೂನಿನ ಮುಂದೆ ಎಲ್ಲರೂ ಸಮಾನರು ಮತ್ತು ಸಮಾನತೆಯ ಹಕ್ಕಿನ ಭರವಸೆ ನೀಡುವ ಸಂವಿಧಾನದ 14ನೇ ವಿಧಿಯನ್ನು ಈ ಮಸೂದೆ ಉಲ್ಲಂಘಿಸುತ್ತದೆ ಎಂದು ವಿರೋಧಪಕ್ಷಗಳು ಆರೋಪಿಸಿದ್ದವು.

ಮಸೂದೆ ವಿರೋಧಿಸಿ ರಾಜೀನಾಮೆ: ಆಗಸ್ಟ್‌ನಲ್ಲಿಯೇ ವಿಆರ್‌ಎಸ್‌ಗೆ ಅರ್ಜಿ ಸಲ್ಲಿಸಿದ್ದ ಅಧಿಕಾರಿಮಸೂದೆ ವಿರೋಧಿಸಿ ರಾಜೀನಾಮೆ: ಆಗಸ್ಟ್‌ನಲ್ಲಿಯೇ ವಿಆರ್‌ಎಸ್‌ಗೆ ಅರ್ಜಿ ಸಲ್ಲಿಸಿದ್ದ ಅಧಿಕಾರಿ

2014ರ ಡಿ. 31ಕ್ಕೂ ಮುನ್ನ ನೆರೆಯ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಿಂದ ಧಾರ್ಮಿಕ ಶೋಷಣೆಯ ಕಾರಣಕ್ಕೆ ತಪ್ಪಿಸಿಕೊಂಡು ಭಾರತಕ್ಕೆ ವಲಸೆ ಬಂದ ಅಲ್ಪಸಂಖ್ಯಾತ ಹಿಂದೂಗಳು, ಸಿಖ್, ಬೌದ್ಧ, ಜೈನ, ಕ್ರೈಸ್ತ ಮತ್ತು ಪಾರ್ಸಿ ಸಮುದಾಯದ ವಲಸಿಗರಿಗೆ ಭಾರತದ ಪೌರತ್ವ ನೀಡುವುದಾಗಿ ಈ ಮಸೂದೆ ಹೇಳಿದೆ. ಆದರೆ ಇದರಲ್ಲಿ ಮುಸ್ಲಿಂ ಸಮುದಾಯದವರನ್ನು ಹೊರಗಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ.

English summary
IUML has challenged the Citizenship Amendment Bill in Supreme Court, which is set to become law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X