Fake: ದೆಹಲಿಯಲ್ಲಿರೋ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ?
ನವ ದೆಹಲಿ, ಮೇ 12: ದೆಹಲಿಯಲ್ಲಿರುವ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಮಾಡಲು ಆಗ್ರಹಿಸಿದ್ದರು. ಊರಿಗೆ ಹೋಗಲು ಕಾಲೇಜು ವಿದ್ಯಾರ್ಥಿಗಳು ಆಡಳಿತ ಮಂಡಳಿಗೆ ಬಸ್ ವ್ಯವಸ್ಥೆ ಮಾಡಲು ಕೇಳಿದ್ದಾರೆ ಎನ್ನುವ ಸುದ್ದಿಯೊಂದು ಬಂದಿತ್ತು.
ಈ ಸುದ್ದಿಯನ್ನು ಒಂದು ನ್ಯೂಸ್ ಪೋರ್ಟಲ್ ವರದಿ ಮಾಡಿದ್ದು, ಅದರ ಸ್ಕ್ರೀನ್ ಶಾಟ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಆದರೆ, ದೆಹಲಿಯಲ್ಲಿರೋ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ. ಕಾಲೇಜಿನ ಆಡಳಿತ ಮಂಡಳಿ ಈ ರೀತಿ ವಿದ್ಯಾರ್ಥಿಗಳಿಗೆ ಮನೆಗೆ ಹೋಗಲು ಹೇಳಿಲ್ಲ. ಬಸ್ ವ್ಯವಸ್ಥೆ ಇದೆಲ್ಲ ಸುಳ್ಳು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
ಲಾಕ್‌ಡೌನ್‌ನಿಂದಾಗಿ ದೇಶದ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಮತ್ತೊಂದು ಕಡೆ ಸಿಕ್ಕಿಹಾಕಿಕೊಂಡಿದ್ದಾರೆ. ಅಂತವರು ಈಗ ತಮ್ಮ ಊರು ಸೇರಬಹುದಾಗಿದೆ. ಸರ್ಕಾರ ಲಾಕ್‌ಡೌನ್‌ನಿಂದ ಸಣ್ಣ ಸಡಿಲಿಕೆ ನೀಡಿದ್ದು, ವಿದ್ಯಾರ್ಥಿಗಳು ಪ್ರಯಾಣ ಮಾಡಬಹುದು.

ಸೋಮವಾರ ಕೆಲವು ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಆದರೆ, ಇ-ಟಿಕೆಟ್ ಹೊಂದಿರುವವರಿಗೆ ಮಾತ್ರ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ.












Click it and Unblock the Notifications