Breaking; ಜಹಾಂಗಿರ್‌ಪುರಿ ಗಲಭೆ; ಅಮಿತ್‌ ಶಾ ಕೈಗೆ ಪ್ರಾಥಮಿಕ ವರದಿ

ನವದೆಹಲಿ, ಏಪ್ರಿಲ್ 19; ನವದೆಹಲಿಯ ಜಹಾಂಗಿರ್‌ಪುರಿಯಲ್ಲಿ ನಡೆದ ಗಲಭೆ ಬಗ್ಗೆ ಪ್ರಾಥಮಿಕ ವರದಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಗೆ ಸಲ್ಲಿಕೆ ಮಾಡಲಾಗಿದೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ದೆಹಲಿ ಪೊಲೀಸರು ವರದಿಯಲ್ಲಿ ಹೇಳಿದ್ದಾರೆ.

ಹನುಮ ಜಯಂತಿ ಮೆರವಣಿಗೆ ವೇಳೆ ಜಹಾಂಗಿರ್‌ಪುರಿಯಲ್ಲಿ ಗಲಭೆ ನಡೆದಿತ್ತು. ದೆಹಲಿ ಪೊಲೀಸರು ಗಲಭೆ ಕುರಿತು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಪ್ರಾಥಮಿಕ ವರದಿಯನ್ನು ಅಮಿತ್ ಶಾಗೆ ಸಲ್ಲಿಸಿದ್ದಾರೆ.

ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಚಾರ ನಡೆದಿತ್ತು. ಪೊಲೀಸರ ಮೇಲೆ ಸಹ ಕಲ್ಲು ತೂರಾಟ ನಡೆದಿತ್ತು. ಕಲ್ಲು ತೂರಾಟದ ವೇಳೆ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದ.

Jahangirpuri Clash Preliminary Report To Amit Shah

ಸೋಮವಾರ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಲು ಹೋದಾಗ ಮತ್ತೆ ಕಲ್ಲು ತೂರಾಟ ನಡೆಸಲಾಗಿತ್ತು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

Jahangirpuri Clash Preliminary Report To Amit Shah

ಕಲ್ಲು ತೂರಾಟ ಘಟನೆ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಹಲವಾರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳಿಸಲಾಗಿದೆ.

ಶನಿವಾರ ನಡೆದ ಗಲಭೆ ವ್ಯವಸ್ಥಿತ ಷಡ್ಯಂತ್ರ ಎಂದು ದೆಹಲಿ ಪೊಲೀಸರು ತಮ್ಮ ಪ್ರಾಥಮಿಕ ವರದಿಯಲ್ಲಿ ಹೇಳಿದ್ದಾರೆ. ಈ ಗಲಭೆಯಲ್ಲಿ ಎಸ್‌ಡಿಪಿಐ ಪಾತ್ರ ಇರುವ ಕುರಿತು ಸಹ ಪರಿಶೀಲಿಸಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗಲಭೆ ನಡೆಯುವ ಸಂದರ್ಭದಲ್ಲಿ ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಸೋನು ಅಲಿಯಾಸ್ ಇಮಾನ್‌ ಎಂಬ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೆರವಣಿಗೆ ಮೇಲೆ ಬಾಟಲಿ ಎಸೆದ 36 ವರ್ಷದ ಶೇಕ್ ಹಮೀದ್ ಎಂಬ ಆರೋಪಿಯನ್ನು ಸಹ ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+