ದೆಹಲಿ ಜಹಾಂಗೀರ್‌ಪುರಿ ಹಿಂಸಾಚಾರದ ಪ್ರಮುಖ ಆರೋಪಿ ಅರೆಸ್ಟ್

ನವದೆಹಲಿ, ಏಪ್ರಿಲ್ 29: ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಫರೀದ್ ಅಲಿಯಾಸ್ ನೀತು ಎಂದು ಗುರುತಿಸಲಾಗಿದೆ.

ಕೋಮುಗಲಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಮುಖ ಪಾತ್ರ ವಹಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾದ ನಮ್ಮ ಹಲವಾರು ತಂಡಗಳು ಗುರುವಾರ ತಮ್ಲುಕ್ ಗ್ರಾಮದ ಅವರ ಚಿಕ್ಕಮ್ಮನ ಮನೆಯಿಂದ ಅವರನ್ನು ಬಂಧಿಸಿವೆ. ಅವರನ್ನು ಇಂದು ವಿಮಾನದ ಮೂಲಕ ನವದೆಹಲಿಗೆ ಕರೆತರಲಾಗುತ್ತಿದೆ ಎಂದು ಮೂಲವೊಂದು ತಿಳಿಸಿದೆ.

ದೆಹಲಿಯಲ್ಲಿ ಗಲಾಟೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅಂದಿನಿಂದ, ಅವರು ತಮ್ಮ ಸ್ಥಳಗಳನ್ನು ಬದಲಾಯಿಸುತ್ತಿದ್ದರು ಮತ್ತು ಪಶ್ಚಿಮ ಬಂಗಾಳದಾದ್ಯಂತ ಚಲಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಫರೀದ್ ಅಲಿಯಾಸ್ ನೀತು ವಿರುದ್ಧ 2010 ರಿಂದ ದರೋಡೆ, ಕಳ್ಳತನ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಆರು ಪ್ರಕರಣಗಳು ದಾಖಲಾಗಿವೆ.

Jahangirpuri Violence case: Delhi Police Arrest Key Accused at West Bengal

ದೆಹಲಿ ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರದ ಘಟನೆ:

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಏಪ್ರಿಲ್ 16ರ ಶನಿವಾರ ಸಂಜೆ ವೇಳೆಗೆ ಹನುಮಾನ್ ಜಯಂತಿ ಆಚರಿಸುತ್ತಿದ್ದ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆಯಿತು. ಪರಸ್ಪರ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಎರಡು ಕೋಮುಗಳ ಜನರು ಕಲ್ಲುತೂರಾಟ ನಡೆಸಿದರು.

Jahangirpuri Violence case: Delhi Police Arrest Key Accused at West Bengal

ಈ ವೇಳೆ 9 ಜನರಿಗೆ ಗಾಯಗಳಾಗಿದ್ದು, ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದರು. ಸಂಜೆ 6 ಗಂಟೆ ವೇಳೆಗೆ ಕಲ್ಲುತೂರಾಟ ನಡೆಸುವುದರ ಜೊತೆಗೆ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಶನಿವಾರವೇ 23 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+