ಹಣ ದುರ್ಬಳಕೆ: ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿಚಾರಣೆ

ನವದೆಹಲಿ, ಜುಲೈ 31: ಕ್ರಿಕೆಟ್ ಸಂಸ್ಥೆಯ ನಿಧಿಯಲ್ಲಿ ದುರ್ಬಳಕೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ವಿಚಾರಣೆಗೆ ಒಳಪಡಿಸಿತು.

ಇ.ಡಿ.ಯ ಚಂಡೀಗಡ ಕಚೇರಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ 38 ಕೋಟಿ ರೂಪಾಯಿ ಮೊತ್ತದ ಹಣದ ಅಕ್ರಮ ವರ್ಗಾವಣೆಯ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ 2015ರಲ್ಲಿ ಎಫ್‌ಐಆರ್ ದಾಖಲಿಸಿತ್ತು. ಅದರ ಆಧಾರದಲ್ಲಿ ಇ.ಡಿ. ತನಿಖೆ ನಡೆಸುತ್ತಿದೆ.

Jammu And Kashmir Cricket Scam ED Questions Farooq Abdullah

ಬಳಿಕ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೂಕ್ ಅಬ್ದುಲ್ಲಾ ಮತ್ತು ಇತರೆ ಮೂವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಬಿಸಿಸಿಐ ಒದಗಿಸಿದ್ದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಆ ಸಂದರ್ಭದಲ್ಲಿ ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಅವರೊಂದಿಗೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಲೀಮ್ ಖಾನ್, ಖಜಾಂಚಿ ಅಹ್ಸಾನ್ ಮಿರ್ಜಾ ಮತ್ತು ಬ್ಯಾಂಕ್ ಎಕ್ಸಿಕ್ಯುಟಿವ್ ಬಶೀರ್ ಅಹ್ಮದ್ ಅವರ ವಿರುದ್ಧ ಕೂಡ ಎಫ್‌ಐಆರ್ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+