ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಣ ದುರ್ಬಳಕೆ: ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿಚಾರಣೆ

|
Google Oneindia Kannada News

ನವದೆಹಲಿ, ಜುಲೈ 31: ಕ್ರಿಕೆಟ್ ಸಂಸ್ಥೆಯ ನಿಧಿಯಲ್ಲಿ ದುರ್ಬಳಕೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ವಿಚಾರಣೆಗೆ ಒಳಪಡಿಸಿತು.

ಇ.ಡಿ.ಯ ಚಂಡೀಗಡ ಕಚೇರಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಹುಕೋಟಿ ವಂಚನೆ ಪ್ರಕರಣ: ಜನಪ್ರಿಯ ನಟಿಗೆ 'ಇಡಿ' ಸಮನ್ಸ್ ಬಹುಕೋಟಿ ವಂಚನೆ ಪ್ರಕರಣ: ಜನಪ್ರಿಯ ನಟಿಗೆ 'ಇಡಿ' ಸಮನ್ಸ್

ಜಮ್ಮು ಮತ್ತು ಕಾಶ್ಮೀರ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ 38 ಕೋಟಿ ರೂಪಾಯಿ ಮೊತ್ತದ ಹಣದ ಅಕ್ರಮ ವರ್ಗಾವಣೆಯ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ 2015ರಲ್ಲಿ ಎಫ್‌ಐಆರ್ ದಾಖಲಿಸಿತ್ತು. ಅದರ ಆಧಾರದಲ್ಲಿ ಇ.ಡಿ. ತನಿಖೆ ನಡೆಸುತ್ತಿದೆ.

Jammu And Kashmir Cricket Scam ED Questions Farooq Abdullah

ಬಳಿಕ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೂಕ್ ಅಬ್ದುಲ್ಲಾ ಮತ್ತು ಇತರೆ ಮೂವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಬಿಸಿಸಿಐ ಒದಗಿಸಿದ್ದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ನೀರವ್ ಮೋದಿಗಿಂತಲೂ ಸಂದೇಸರಾ ಸೋದರರು ಬ್ಯಾಂಕುಗಳಿಗೆ ಹಾಕಿದ ನಾಮ ದೊಡ್ಡದು!ನೀರವ್ ಮೋದಿಗಿಂತಲೂ ಸಂದೇಸರಾ ಸೋದರರು ಬ್ಯಾಂಕುಗಳಿಗೆ ಹಾಕಿದ ನಾಮ ದೊಡ್ಡದು!

ಆ ಸಂದರ್ಭದಲ್ಲಿ ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಅವರೊಂದಿಗೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಲೀಮ್ ಖಾನ್, ಖಜಾಂಚಿ ಅಹ್ಸಾನ್ ಮಿರ್ಜಾ ಮತ್ತು ಬ್ಯಾಂಕ್ ಎಕ್ಸಿಕ್ಯುಟಿವ್ ಬಶೀರ್ ಅಹ್ಮದ್ ಅವರ ವಿರುದ್ಧ ಕೂಡ ಎಫ್‌ಐಆರ್ ದಾಖಲಾಗಿದೆ.

English summary
ED on Wednesday questioned Jammu and Kashmir former Cheif Minister Farooq Abdullah in connection with a scam of state cricket association.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X