ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದ ಪರಿಸ್ಥಿತಿ: ಅಮಿತ್ ಶಾ, ಅಜಿತ್ ದೋವಲ್ ಮಾತುಕತೆ

|
Google Oneindia Kannada News

ನವದೆಹಲಿ, ಆಗಸ್ಟ್ 19: ಜಮ್ಮು ಮತ್ತು ಕಾಶ್ಮೀರದ ಪ್ರಸ್ತುವ ಪರಿಸ್ಥಿತಿ ಅರಿಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಸೋಮವಾರ(ಆಗಸ್ಟ್ 19)ರಂದು ಭೇಟಿ ಮಾಡಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಹೇರಿದ್ದ ನಿರ್ಬಂಧವನ್ನು ಒಂದೊಂದಾಗಿಯೇ ಹಿಂತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. 11 ದಿನಗಳ ಕಾಲ ಜಮ್ಮು ಕಾಶ್ಮೀರದಲ್ಲಿ ಇದ್ದು ಇತ್ತೀಚೆಗಷ್ಟೇ ದೋವಲ್ ಅವರು ದೆಹಲಿಗೆ ಮರಳಿದ್ದರು.

ಜಮ್ಮು ಕಾಶ್ಮೀರದಲ್ಲಿ ಶಾಲೆಗಳು ಪುನರಾರಂಭ: ಬೆರಳೆಣಿಕೆಯಷ್ಟು ಮಕ್ಕಳು ಹಾಜರ್ ಜಮ್ಮು ಕಾಶ್ಮೀರದಲ್ಲಿ ಶಾಲೆಗಳು ಪುನರಾರಂಭ: ಬೆರಳೆಣಿಕೆಯಷ್ಟು ಮಕ್ಕಳು ಹಾಜರ್

ಹಾಗಾಗಿ ಈಗ ಜಮ್ಮು ಕಾಶ್ಮೀರ ಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ ಎರಡು ವಾರಗಳಿಂದ ಜಮ್ಮು ಕಾಶ್ಮೀರದಲ್ಲಿ ಹಿಂದೆಂದೂ ಕಂಡಿರದ ಭದ್ರತೆಯನ್ನು ಕಲ್ಪಿಸಲಾಗಿತ್ತು. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿಧಿ 370ನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಕಾರಣ ಅಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲು ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು.

Jammu And Kashmir Issue Amit Shah Meets Ajith Doval

ರಾಜಕೀಯ ಮುಖಂಡರನ್ನು ಗೃಹ ಬಂಧನದಲ್ಲಿಡಲಾಗಿತ್ತು. ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಈಗ ಒಂದೊಂದಾಗಿಯೇ ನಿರ್ಬಂಧಗಳನ್ನು ಹಿಂಪಡೆಯಲಾಗುತ್ತಿದೆ.

ವಿಡಿಯೋ: ತಣ್ಣಗಾದ ಕಾಶ್ಮೀರದಲ್ಲಿ ಭಾರತದ 'ಜೇಮ್ಸ್‌ ಬಾಂಡ್' ಸುತ್ತಾಟವಿಡಿಯೋ: ತಣ್ಣಗಾದ ಕಾಶ್ಮೀರದಲ್ಲಿ ಭಾರತದ 'ಜೇಮ್ಸ್‌ ಬಾಂಡ್' ಸುತ್ತಾಟ

ಸುಪ್ರೀಂಕೋರ್ಟ್‌ನಲ್ಲಿ ಆರು ಅರ್ಜಿಗಳ ವಿಚಾರಣೆ ಬಾಕಿ ಇದೆ. ಇಂದಿನಿಂದ ಶಾಲೆಗಳು ಆರಂಭವಾಯಿತಾದರೂ ಕೇವಲ ಬೆರಳೆಣಿಕೆಯಷ್ಟು ಮಕ್ಕಳು ಮಾತ್ರ ಹಾಜರಾಗಿದ್ದರು. ಇದೆಲ್ಲದರ ಕುರಿತು ಅಜಿತ್ ದೋವ್ ಹಾಗೂ ಅಮಿತ್ ಶಾ ಮಾತುಕತೆ ನಡೆಸಿದ್ದಾರೆ.

English summary
Jammu And Kashmir Issue Amit Shah Meets Ajith Doval,Doval has recently returned from Kashmir after an 11-day visit, during which he met the locals and the security forces to get a feel of the ground situation in the valley.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X