ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನತಾ ಕರ್ಫ್ಯೂ ಆಯ್ತು, ಭಾರತೀಯರಿಗೆ ಆರ್ಥಿಕ ನೆರವು ಸಿಗೋದ್ಯಾವಾಗ?

|
Google Oneindia Kannada News

ನವದೆಹಲಿ, ಮಾರ್ಚ್.23: ಕೊರೊನಾ ವೈರಸ್ ಹರಡುವುದಕ್ಕೆ ಕಡಿವಾಣ ಹಾಕಲು ಪ್ರಧಾನಮಂತ್ರಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಆಗಿದೆ. ಭಾನುವಾರ ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇಡೀ ಭಾರತಕ್ಕೆ ಭಾರತವೇ ಸ್ತಬ್ಧವಾಗಿದೆ.

14 ಗಂಟೆಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರವೇನೋ ಯಶಸ್ವಿಯಾಗಿದೆ. ಇದರ ನಡುವೆ ಭಾರತೀಯರು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೇಂದ್ರವು ಅನುದಾನವನ್ನು ಘೋಷಿಸಬೇಕು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲೇ 400ರ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರು!ಭಾರತದಲ್ಲೇ 400ರ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರು!

ಪ್ರಧಾನಮಂತ್ರಿ ತೀರ್ಮಾನದಿಂದ ಹಲವು ರಾಜ್ಯಗಳು ಪ್ರೇರೇಪಣೆಯನ್ನು ಪಡೆದುಕೊಂಡಿವೆ. ಕೇಂದ್ರ ಸರ್ಕಾರವು 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವುದಾಗಿ ಘೋಷಿಸಿದ್ದು, ಇದರ ನಡುವೆ ಹಲವು ರಾಜ್ಯಗಳಲ್ಲಿ ಜನತಾ ಕರ್ಫ್ಯೂವನ್ನು ಮುಂದುವರಿಸಲಾಗಿದೆ.

Janata Curfew Closed, Indians Are Expecting For Financial Support

ದೆಹಲಿ ಸೇರಿದಂತೆ ಹಲವು ರಾಜ್ಯಗಳು ಲಾಕ್ ಡೌನ್:

ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಆಂಧ್ರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಮಾರ್ಚ್.31ರವರೆಗೂ ಕಂಪ್ಲೀಟ್ ಲಾಕ್ ಡೌನ್ ಮಾಡುವುದಾಗಿ ಘೋಷಣೆ ಮಾಡಿವೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿನ ಅಂಗಡಿ ಮುಂಗಟ್ಟುಗಳು, ಸಂಚಾರ ವ್ಯವಸ್ಥೆ, ಗಡಿರೇಖೆಗಳೆಲ್ಲ ಬಂದ್ ಆಗಲಿವೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಆರ್ಥಿಕ ನೆರವನ್ನು ನೀಡಬೇಕಾಗಿದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

English summary
"Janata Curfew Closed, Indians Are Expecting For Financial Support"- Ex-Finance Minister P.Chidambaram Demand To Central Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X