ಕೋಮಾಕ್ಕೆ ಜಾರಿದ ಹಿರಿಯ ನಾಯಕ ಜಸ್ವಂತ್ ಸಿಂಗ್

ನವದೆಹಲಿ, ಆ.8: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ಜಸ್ವಂತ್‌ಸಿಂಗ್ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ. ಪ್ರಜ್ಞೆ ತಪ್ಪಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡ ಜಸ್ವಂತ್ ಅವರು ಈಗ ಕೋಮಾಕ್ಕೆ ಜಾರಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ.

ಗುರುವಾರ ತಡರಾತ್ರಿ ಮನೆಯಲ್ಲಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ ಜಸ್ವಂತ್‌ಸಿಂಗ್ ಅವರು ಕುಸಿದು ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು .ಅವರನ್ನು ದೆಹಲಿಯಲ್ಲಿರುವ ಆರ್ಮಿಯ ರಿಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ತುರ್ತು ಚಿಕಿತ್ಸಾ ಘಟಕ (ಐಸಿಯು)ದಲ್ಲಿರುವ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡುಬಂದಿಲ್ಲ. ಪರಿಸ್ಥಿತಿ ಕಠಿಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಜಸ್ವಂತ್‌ಸಿಂಗ್ ಅವರಿಗೆ ಆರ್ಮಿ ಆಸ್ಪತ್ರೆಯ ನುರಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಈ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿಯ ಕೆಲವು ಹಿರಿಯ ನಾಯಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ

ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ

76 ವರ್ಷದ ಜಸ್ವಂತ್‌ಸಿಂಗ್ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ವಜಾಗೊಂಡಿದ್ದರು. ರಾಜಸ್ಥಾನದ ಬಾರ್ಮರ್ ಲೋಕಸಭೆ ಕ್ಷೇತ್ರದಿಂದಲೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಆದರೆ, ಈ ಕ್ಷೇತ್ರಕ್ಕೆ ಬೇರೊಬ್ಬರಿಗೆ ಟಿಕೆಟ್ ನೀಡಲಾಗಿತ್ತು. ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಜಸ್ವಂತ್‌ಸಿಂಗ್ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು.

ಪ್ರಧಾನಿ ಸಚಿವಾಲಯದಿಂದ ಟ್ವೀಟ್

ಜಸ್ವಂತ್ ಅವರ ಆರೋಗ್ಯದ ಬಗ್ಗೆ ಪ್ರಧಾನಿ ಸಚಿವಾಲಯ ಅಧಿಕೃತ ಟ್ವೀಟ್

ಸೇನಾಪಡೆಯಲ್ಲಿ ಮಾಜಿ ಅಧಿಕಾರಿ ಜಸ್ವಂತ್

ಸೇನಾಪಡೆಯಲ್ಲಿ ಮಾಜಿ ಅಧಿಕಾರಿ ಜಸ್ವಂತ್

ಭಾರತೀಯ ಸೇನಾಪಡೆಯಲ್ಲಿ ಅತ್ಯಂತ ಹಿರಿಯ ಅಧಿಕಾರಿಯಾಗಿದ್ದ ಜಸ್ವಂತ್‌ಸಿಂಗ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಧಿಕಾರಾವಧಿಯಲ್ಲಿ ಅತ್ಯಂತ ಮಹತ್ವದ ಖಾತೆಗಳಾದ ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಕಳೆದ ಚುನಾವಣೆಯಲ್ಲಿ ಕರ್ನಲ್ ಸೋನಾರಾಮ್ ಚೌಧರಿ ವಿರುದ್ಧ ಸೋಲು ಅನುಭವಿಸಿದ್ದರು.

ಜಸ್ವಂತ್ ಆರೋಗ್ಯದ ಬಗ್ಗೆ ಶಿವ ಅರೂರ್ ಟ್ವೀಟ್

ತಲೆಗೆ ಪೆಟ್ಟು ಬಿದ್ದು ಗಾಯಗೊಂಡಿರುವ ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಕೋಮಾಕ್ಕೆ ಜಾರಿದ್ದಾರೆ ಎಂದು ಶಿವ ಅರೂರ್ ಟ್ವೀಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+