ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾ ವಿಚಾರಣೆ ಅಗತ್ಯವಿಲ್ಲ: ಸುಪ್ರೀಂಕೋರ್ಟ್

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಏ.22: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸೆಲ್ವಿ ಜೆ ಜಯಲಲಿತಾ ಅವರಿಗೆ ಸುಪ್ರೀಂಕೋರ್ಟಿನಿಂದ ಸಿಹಿ ಸುದ್ದಿ ಸಿಕ್ಕಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ಅವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸುವ ಅಗತ್ಯವಿಲ್ಲ ಎಂದು ತ್ರಿಸದಸ್ಯ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಜೊತೆಗೆ ವಿಶೇಷ ಸರ್ಕಾರಿ ಅಭಿಯೋಜಕ ನೇಮಕ ಕೂಡಾ ಸರಿಯಿಲ್ಲ ಎಂದು ನ್ಯಾಯಪೀಠ ಹೇಳಿದೆ.[ಜಯಲಲಿತಾ ಜಾಮೀನು 4 ತಿಂಗಳು ವಿಸ್ತರಣೆ]

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದ ಮುಂದಿನ ವಿಚಾರಣೆ ಮುಗಿದಿದ್ದು ಸೋಮವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಡಿಎಂಕೆ ಮುಖಂಡ ಅನ್ಬಳಗನ್ ಅವರು ನೀಡಿರುವ ಸಾಕ್ಷಿ ಹಾಗೂ ಇತ್ತೀಚಿನ ಮನವಿಯನ್ನು ಕರ್ನಾಟಕ ಹೈಕೋರ್ಟ್ ಪರಿಶೀಲಿಸಿದ ನಂತರ ಈ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡುವ ನಿರೀಕ್ಷೆಯಿದೆ. [ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]

Jaya appeal- Prosecutor appointment wrong, but case won't be reheard observes SC

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅವಧಿಯನ್ನು ಮೇ 12ರವರೆಗೆ ವಿಸ್ತರಣೆ ಮಾಡಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಶುಕ್ರವಾರ(ಏ.17) ಕ್ಕೆ ಜಯಲಲಿತಾ ಜಾಮೀನು ಅವಧಿ ಮುಕ್ತಾಯಗೊಂಡಿತ್ತು. [ಜಯಲಲಿತಾಗೆ ಜಾಮೀನು ಸಿಕ್ಕಿದ್ದೇಕೆ? ಆದೇಶ ಪ್ರತಿ ಓದಿ]

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಜಯಲಲಿತಾ ಅವರಿಗೆ ಅ.17, 2014ರಂದು ಸುಪ್ರೀಂಕೋರ್ಟ್ನಿಂದ ಜಾಮೀನು ಲಭಿಸಿತ್ತು.ಜೈಲುವಾಸ ಅಂತ್ಯಗೊಂಡ ನಂತರ ಚೆನ್ನೈಗೆ ಮರಳಿದ್ದರು. ಕೋರ್ಟ್ ನಿರ್ದೇಶನದಂತೆ ತಮ್ಮ ನಿವಾಸದಲ್ಲೇ ನೆಲೆಸಿ ರಾಜಕೀಯದಿಂದ ದೂರವುಳಿದಿದ್ದರು.

English summary
The Supreme Court observed that a procedural irregularity does not warrant a fresh hearing of the case. Further the court also observed that the Karnataka High Court will scan the evidence and fresh submissions made by DMK leader Anbazaghan and only then write the verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X