ಕೇಂದ್ರ ಎನ್ ಡಿಎ ಮೈತ್ರಿಕೂಟದ ಜೊತೆ ಒಂದಾಗಲಿದೆಯಾ ಜೆಡಿಯು?
ನವದೆಹಲಿ, ಜುಲೈ 27: ಬಿಹಾರದಲ್ಲಾದ ಕ್ಷಿಪ್ರ ರಾಜಕೀಯ ಬೆಳವಣಿಗೆಯ ನಂತರ ಕೇಂದ್ರ ಎನ್ ಡಿಎ ಮೈತ್ರಿಕೂಟವನ್ನು ಜೆಡಿಯು ಸೇರಿಕೊಳ್ಳಲಿದೆಯಾ? ಹೌದು ಎನ್ನುತ್ತಿವೆ ಬಲ್ಲ ಮೂಲಗಳು.
ಜುಲೈ 26 ರಂದು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಆರ್ ಜೆಡಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿದ್ದ ನಿತೀಶ್ ಕುಮಾರ್, ಜುಲೈ 27 ರಂದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ.

ಮೂಲಗಳ ಪ್ರಕಾರ ಜೆಡಿಯು, ಕೇಂದ್ರದ ಎನ್ ಡಿಎ ಮೈತ್ರಿಕೂಟವನ್ನು ಸೇರಿಕೊಳ್ಳಲಿದ್ದು, ಮುಂದಿನ ತಿಂಗಳು ನಡೆಯಲಿರುವ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯ ವೇಳೆ ಜೆಡಿಯುದ ಒಬ್ಬ ಸದಸ್ಯರಿಗೆ ಕ್ಯಾಬಿನೇಟ್ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
ಆದರೆ ಈ ಕುರಿತು ಬಿಜೆಪಿ ಅಥವಾ ಜೆಡಿಯು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.












Click it and Unblock the Notifications