ಬಿಹಾರದ ಮಿತ್ರಪಕ್ಷ ಜೆಡಿಯುಗೆ ಉಪ ಸಭಾಧ್ಯಕ್ಷ ಸ್ಥಾನ ನೀಡಲು ಬಿಜೆಪಿ ಚಿಂತನೆ
ನವದೆಹಲಿ, ಜೂನ್ 20: ಲೋಕಸಭೆಯ ಉಪ ಸಭಾಧ್ಯಕ್ಷರ ಹುದ್ದೆಯನ್ನು ಬಿಜೆಪಿ ತನ್ನ ಬಿಹಾರದ ಮಿತ್ರಪಕ್ಷ ಜೆಡಿಯುಗೆ ನೀಡುವ ಸಾಧ್ಯತೆ ಇದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರೇ ಅಧಿಕ ಸಂಖ್ಯೆಯಲ್ಲಿರುವ ಲೋಕಸಭೆಯಲ್ಲಿ ವಿರೋಧಪಕ್ಷದಿಂದ ಸಾಂಕೇತಿಕವಾಗಿ ಸ್ಪರ್ಧೆ ನಡೆಯಲಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಲೋಕಸಭೆಯ ಉಪ ಸಭಾಧ್ಯಕ್ಷ ಯಾರಾಗಲಿದ್ದಾರೆ ಎಂಬುದನ್ನು ಎನ್‌ಡಿಎ ನಿರ್ಧರಿಸಲಿದೆ.
ಸಾಮಾನ್ಯವಾಗಿ ಆಡಳಿತಾರೂಢ ಸರ್ಕಾರದ ಭಾಗವಾಗಿರದ ಪಕ್ಷಕ್ಕೆ ಈ ಹುದ್ದೆಯನ್ನು ನೀಡುವುದು ಸಂಪ್ರದಾಯ. 2014ರಲ್ಲಿ ತಮಿಳುನಾಡಿನ ಎಐಎಡಿಎಂಕೆ ಸಂಸದ ಎಂ. ತಂಬಿದೊರೈ ಅವರಿಗೆ ಬಿಜೆಪಿ ಈ ಹುದ್ದೆ ನೀಡಿತ್ತು. 2019ರ ಚುನಾವಣೆಯಲ್ಲಿ ಎಐಎಡಿಎಂಕೆ, ಬಿಜೆಪಿಯ ಮಿತ್ರಪಕ್ಷವಾಗಿ ಸ್ಪರ್ಧಿಸಿತ್ತು.

ಬಿಜೆಪಿ ಮೂಲಗಳ ಪ್ರಕಾರ ಬಿಜೆಪಿಯ ಬಿಹಾರದ ಮಿತ್ರಪಕ್ಷ ಜೆಡಿಯು ಅಥವಾ ಒಡಿಶಾದ ಬಿಜು ಜನತಾದಳದ ಸಂಸದರೊಬ್ಬರು ಈ ಹುದ್ದೆಗೆ ಏರುವ ಸಾಧ್ಯತೆ ಇದೆ. ಜೆಡಿಯು ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರೂ, ಎನ್‌ಡಿಎ ಸರ್ಕಾರದಲ್ಲಿ ಯಾವುದೇ ಸಚಿವ ಸ್ಥಾನ ಪಡೆದುಕೊಂಡಿಲ್ಲ.
ಈ ನಡುವೆ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಹೆಸರೂ ಉಪಸಭಾಧ್ಯಕ್ಷರ ಸ್ಥಾನಕ್ಕೆ ಕೇಳಿಬಂದಿದೆ. ಆದರೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವವರೆಗೂ ಈ ಹುದ್ದೆಯನ್ನು ತಾವು ಒಪ್ಪಿಕೊಳ್ಳುವುದಿಲ್ಲ. ಇದನ್ನು ಪಡೆದುಕೊಂಡು ನಾವೇನು ಸಾಧನೆ ಮಾಡಲು ಸಾಧ್ಯ? ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications