ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 3ರಂದು ಜೆಇಇ ಪರೀಕ್ಷೆ ಕುರಿತು ಘೋಷಿಸಿದ ಧರ್ಮೇಂದ್ರ ಪ್ರಧಾನ್

|
Google Oneindia Kannada News

ನವದೆಹಲಿ, ಜುಲೈ 26: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕ ಕಡಿಮೆಯಾಗುತ್ತಿರುವುದರ ನಡುವೆ 2021ನೇ ಶೈಕ್ಷಣಿಕ ಸಾಲಿನ ಭಾರತೀಯ ತಾಂತ್ರಿಕ ಸಂಸ್ಥೆ(ಐಐಟಿ)ಗೆ ಸಂಬಂಧಿಸಿದ ಪ್ರವೇಶಾತಿಗೆ ಅಗತ್ಯವಾಗಿರುವ ಜೆಇಇ ಪರೀಕ್ಷೆಗೆ ದಿನಾಂಕವನ್ನು ಪ್ರಕಟಿಸಲಾಗಿದೆ.

ದೇಶದಲ್ಲಿ 2021ರ ಅಕ್ಟೋಬರ್ 3ರಂದು ಇಂಜಿನಿಯರಿಂಗ್ ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಜೆಇಇ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕಳೆದ 2021ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ಈಗಾಗಲೇ ಮೊದಲ ಮತ್ತು ಎರಡನೇ ಹಂತದ ಜೆಇಇ ಪರೀಕ್ಷೆಗಳು ಮುಗಿದಿವೆ.

ಜೆಇಇ (Main) ನಾಲ್ಕನೇ ಹಂತದ ಪರೀಕ್ಷೆ ಮುಂದೂಡಿಕೆಜೆಇಇ (Main) ನಾಲ್ಕನೇ ಹಂತದ ಪರೀಕ್ಷೆ ಮುಂದೂಡಿಕೆ

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕದ ಹಿನ್ನೆಲೆ ಸರ್ಕಾರದ ಮಾರ್ಗಸೂಚಿ ಮತ್ತು ಶಿಷ್ಟಾಚಾರದ ಅಡಿಯಲ್ಲೇ ಪರೀಕ್ಷೆಗಳನ್ನು ನಡೆಸುವುದಕ್ಕೆ ಎಲ್ಲ ರೀತಿಯಾದ ಸಿದ್ಧತೆಗಳ್ನನು ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕೊವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.

JEE 2021 Examination For Admission In IITs will be held on the 3rd October, 2021

ಕೊವಿಡ್-19 ನಿಯಮಗಳ ಪಾಲನೆಗೆ ಸೂಚನೆ:

ಜೆಇಇ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಮೇಲ್ವಿಚಾರಕರು ಸೇರಿದಂತೆ ಎಲ್ಲ ಸಿಬ್ಬಂದಿಯು ಕೊವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ರೀತಿ ನಿಯಮಗಳನ್ನು ಪಾಲಿಸುವಂತೆ ಖಡಕ್ ಸೂಚನೆ ನೀಡಲಾಗಿದೆ.

ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ:

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದಾಗಿ ಮೂರನೇ ಹಂತದ ಜೆಇಇ ಪ್ರಮುಖ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಿಲ್ಲ. ಕಳೆದ ಜುಲೈ 25 ರಿಂದ 27ರವರೆಗೂ ನಡೆದ ಜೆಇಇ ಮೂರನೇ ಹಂತದ ಮುಖ್ಯ ಪರೀಕ್ಷೆಯಲ್ಲಿ ಹಲವು ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗಿರಲಿಲ್ಲ. ಅಂಥ ವಿದ್ಯಾರ್ಥಿಗಳಿಗೆ ಇದೀಗ ಮತ್ತೊಂದು ಅವಕಾಶ ನೀಡಲಾಗುತ್ತಿದೆ.

English summary
JEE 2021 Examination For Admission In IITs will be held on the 3rd October, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X