ಸ್ಪಾಟ್ ಫಿಕ್ಸಿಂಗ್ ಹಗರಣ : ಮೇಯಪ್ಪನ್ ಗೆ ಮತ್ತಷ್ಟು ಸಂಕಷ್ಟ

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಹಗರಣದ ಕುರಿತು ತನಿಖೆ ನಡೆಸಲು, ನ್ಯಾಯಾಮೂರ್ತಿ ಮುಕುಲ್ ಮುಗ್ದಲ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿತ್ತು. ಸಮಿತಿ ಸೋಮವಾರ ಸುಪ್ರೀಂಕೋರ್ಟ್ ಗೆ ತನ್ನ ವರದಿ ನೀಡಿದ್ದು, ಹಗರಣದಲ್ಲಿ ಗುರುನಾಥ್ ಮೇಯಪ್ಪನ್ ಭಾಗಿಯಾಗಿರುವುದಾಗಿ ಹೇಳಿದೆ. [ಗುರು ಸಿಎಸ್ ಕೆ ಬಾಸ್ ಅಲ್ವಂತೆ]
ಹಾಗೆಯೇ ಹಗರಣದಲ್ಲಿ ರಾಜ್‌ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ಅವರ ಮೇಲಿನ ಆರೋಪದ ಬಗ್ಗೆ ಮುಂದಿನ ತನಿಖೆ ನಂತರ ತಿಳಿಸಲಾಗುತ್ತದೆ ಎಂದು ಸಮಿತಿ ವರದಿಯಲ್ಲಿ ಹೇಳಿದೆ. ವರದಿ ಸ್ವೀಕರಿಸಿರುವ ಸುಪ್ರೀಂಕೋರ್ಟ್ ಪ್ರಕರಣದ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ. ಅಲ್ಲದೇ, ಐಪಿಎಲ್ 7ನೇ ಆವೃತ್ತಿಯ ಹರಾಜು ಪ್ರಕ್ರಿಯೆಗೆ ಯಾವುದೇ ತಡೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
170 ಪುಟಗಳ ವರದಿಗೆ ಅಡಿ ಟಿಪ್ಪಣಿಗಳನ್ನು ಸೇರಿಸಿದಂತೆ ಸುಮಾರು 4000 ಪುಟಗಳ ವರದಿಯನ್ನು ನ್ಯಾಯಲಯಕ್ಕೆ ಸಲ್ಲಿಸಲಾಗಿದೆ. ತಂಡದ ಆಟಗಾರರು, ಪರ್ತಕರ್ತರು ಸೇರಿದಂತೆ ಹಲವರ ಹೇಳಿಕೆಗಳನ್ನು ವರದಿಯಲ್ಲಿ ಸೇರಿಸಲಾಗಿದೆ.
ಗುರುನಾಥ್ ಮೇಯಪ್ಪನ್ ಹಾಗೂ ರಾಜ್ ಕುಂದ್ರಾ ವಿರುದ್ಧ ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಆರೋಪ ಕೇಳಿಬಂದ ಬಳಿಕ ಬಿಸಿಸಿಐ ಆಂತರಿಕ ತನಿಖೆ ನಡೆದಿತ್ತು. ಅದರಲ್ಲಿ ಇಬ್ಬರಿಗೂ ಕ್ಲೀನ್ ಚಿಟ್ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ, ಬಿಹಾರ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಅದಿತ್ಯ ಮೆಹತಾ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ನ್ಯಾ.ಮುಕುಲ್ ಮದಗಲ್ ನೇತೃತ್ವದಲ್ಲಿ ಮೂರು ಸದಸ್ಯರ ತನಿಖಾ ತಂಡವನ್ನ ರಚಿಸಿ ವರದಿ ನೀಡುವಂತೆ ಸೂಚನೆ ನೀಡಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications