ಯಾಕೂಬ್‌ಗೆ ಗಲ್ಲು, ಜಡ್ಜ್‌ಗೆ ಜೀವ ಬೆದರಿಕೆ
ನವದೆಹಲಿ, ಆಗಸ್ಟ್ 7 : ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ತೀರ್ಪು ನೀಡಿದ್ದ ನ್ಯಾ.ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು ರಚನೆ ಮಾಡಿದ್ದ ತ್ರಿ ಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿದ್ದರು. ಯಾಕೂಬ್ ಗಲ್ಲು ಶಿಕ್ಷೆಗೆ ತಡೆ ನೀಡುವ ಅರ್ಜಿಯ ವಿಚಾರಣೆಯನ್ನು ತಡರಾತ್ರಿ ಕೋರ್ಟ್‌ನಲ್ಲಿ ನಡೆಸಿ, ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಲಾಗಿತ್ತು. [ಯಾಕೂಬ್ ಗಲ್ಲಿ, ಮಧ್ಯರಾತ್ರಿ ಹೈಡ್ರಾಮ]

ಈ ತ್ರಿ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಅವರಿಗೆ ಬೆದರಿಕೆ ಪತ್ರ ಬಂದಿದ್ದು, ದೆಹಲಿ ಪೊಲೀಸರು ಅವರಿಗೆ ಹೆಚ್ಚಿನ ಭದ್ರತೆ ನೀಡಿದ್ದಾರೆ ಮತ್ತು ಬೆದರಿಕೆ ಪತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪತ್ರವನ್ನು ಯಾರು ಬರೆದಿರಬಹುದು? ಎಂದು ತನಿಖೆ ನಡೆಸಲಾಗುತ್ತಿದೆ. [ಮುಂಬೈ ಸ್ಫೋಟ Timeline]
ಎಲ್ಲರಿಗೂ ಭದ್ರತೆ ನೀಡಲಾಗಿದೆ : ಜುಲೈ 30ರಂದು ಸುಪ್ರೀಂಕೋರ್ಟ್‌ನ ಹಾಲ್ ನಂ 4ರಲ್ಲಿ ಮುಂಜಾನೆ 1.30ಕ್ಕೆ ಯಾಕೂಬ್ ಅರ್ಜಿಯ ವಿಚಾರಣೆ ನಡೆಸಿದ್ದ ತ್ರಿ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿಗೆ ಯಾಕೂಬ್ ಗಲ್ಲು ಶಿಕ್ಷೆಯ ಬಳಿಕ ಭದ್ರತೆ ಒದಗಿಸಲಾಗಿದೆ. [ಗಲ್ಲು ಶಿಕ್ಷೆಯ ಅರ್ಜಿ ರಾತ್ರಿ ವಿಚಾರಣೆ ನಡೆದಿದ್ದು ಮೊದಲಲ್ಲ]
ಟೈಗರ್ ಮೆಮನ್ ಕರೆ : ಯಾಕೂಬ್ ಗಲ್ಲು ಶಿಕ್ಷೆಯ ನಂತರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಮತ್ತು ಯಾಕೂಬ್ ಸಹೋದರ ಟೈಗರ್ ಮೆಮನ್ ಮುಂಬೈನಲ್ಲಿರುವ ಕುಟುಂಬದವರಿಗೆ ಕರೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಯಾಕೂಬ್ ಗಲ್ಲು ಶಿಕ್ಷೆಗೆ ಕೆಲವೇ ಗಂಟೆಗಳ ಹಿಂದೆ ಟೈಗರ್ ಮೆಮನ್ ಮುಂಬೈಗೆ ಕರೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಗಲ್ಲು ಶಿಕ್ಷೆಗೆ ಪ್ರತೀಕಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದ ಎಂದು ತಿಳಿದುಬಂದಿದೆ. ಈ ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications