ನ್ಯಾ.ಲೋಯಾ ಹತ್ಯೆ: SIT ರಚಿಸುವಂತೆ ಕೋರಿದ್ದ ಅರ್ಜಿ ವಜಾ
ನವದೆಹಲಿ, ಏಪ್ರಿಲ್ 19: ಸಿಬಿಐ ಕೋರ್ಟಿನ ನ್ಯಾಯಾಧೀಶರಾಗಿದ್ದ ನ್ಯಾ.ಬಿ.ಎಚ್.ಲೋಯಾ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ದಳ(ಎಸ್ಐಟಿ) ರಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾ.ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಲೋಯಾ ಅವರದು ಆಕಸ್ಮಿಕ ಸಾವು. ಇದರಲ್ಲಿ ತನಿಖೆ ಮಾಡುವಂಥದ್ದು ಏನೂ ಇಲ್ಲ ಎಂದು ನ್ಯಾಯಾಲಯ ಹೇಳಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
2005 ರಲ್ಲಿ ಗುಜರಾತಿನಲ್ಲಿ ನಡೆದ ಸೋಹ್ರಾಬುದ್ದಿನ್ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ಕೋರ್ಟಿನ ನ್ಯಾಯಾಧೀಶ ಲೋಯಾ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿ 2014 ರಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

ಅವರು ಹೃದಯಾಘಾತದಿಂದ ನಿಧನರಾಗಿದ್ದು ಎಂದು ವೈದ್ಯಕೀಯ ವರದಿಗಳು ಹೇಳಿದ್ದವಾದರೂ, ಅವರ ಸಾವು ಅಸಹಜವೆಮದು ಶಂಕಿಸಿ ಮಹಾರಾಷ್ಟ್ರ ಮೂಲದ ಪತ್ರಕರ್ತ ಬಿ.ಎಸ್.ಲೋನೆ ಮತ್ತು ಸಾಮಾಜಿಕ ಕಾರ್ಯಕರ್ತ ತೆಹ್ಸೀನ್ ಪೂನಾವಾಲಾ ಈ ಕುರಿತು ಪಾರದರ್ಶಕ ವಿಚಾರಣೆ ನಡೆಯಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ವರ್ಷ ಜನವರಿಯಲ್ಲಿ ನ್ಯಾ. ಲೋಯಾ ಅವರ ಪುತ್ರ ಅನುಜ್ ಲೋಯಾ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ತಂದೆಯ ಸಾವು ಸಹಜವಾದದ್ದು. ಅವರು ಹೃದಯಾಘಾತದಿಂದಲೇ ಸತ್ತಿದ್ದು' ಎಂದು ಹೇಳಿಕೆ ನೀದಿದನ್ನು ಇಲ್ಲಿ ಉಲ್ಲೇಖಿಸಲಬಹುದು.












Click it and Unblock the Notifications