ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾ ಗಾಂಧಿಯನ್ನು ಭೇಟಿಯಾದ ಕಮಲ್ ನಾಥ್

|
Google Oneindia Kannada News

ನವದೆಹಲಿ, ಜು.15: ಕಾಂಗ್ರೆಸ್‌ ಪಕ್ಷದಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಸ್ಥಾನದ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆ ಕಮಲ್‌ ನಾಥ್‌, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಗುರುವಾರ ಭೇಟಿಯಾದರು.

ಕಾಂಗ್ರೆಸ್ ಪಕ್ಷದ ಸಂಘಟನೆ ಸಮಿತಿಯನ್ನು ಪುನರುಜ್ಜೀನವಗೊಳಿಸಿದ ಸಂದರ್ಭ ಕಮಲ್‌ ನಾಥ್‌ ಕಾಂಗ್ರೆಸ್‌ನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗಿದೆ. ಈ ನಡುವೆ ಕಮಲ್‌ ನಾಥ್‌ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದಾರೆ.

ಕಮಲ್‌ನಾಥ್‌ರ 'ಭಾರತೀಯ ರೂಪಾಂತರ' ಹೇಳಿಕೆ ರಾಷ್ಟ್ರಕ್ಕೆ ಮಾಡಿದ ಅಪಮಾನ - ಎಫ್‌ಐಆರ್‌ ದಾಖಲು ಕಮಲ್‌ನಾಥ್‌ರ 'ಭಾರತೀಯ ರೂಪಾಂತರ' ಹೇಳಿಕೆ ರಾಷ್ಟ್ರಕ್ಕೆ ಮಾಡಿದ ಅಪಮಾನ - ಎಫ್‌ಐಆರ್‌ ದಾಖಲು

ಕಮಲ್‌ ನಾಥ್‌ ಪಕ್ಷದ ಅನುಭವಿಗಳಲ್ಲಿ ಓರ್ವರಾಗಿದ್ದಾರೆ. ಸಂಘಟನೆಯ ಕೂಲಂಕಷ ಪರೀಕ್ಷೆಯನ್ನು ಕೋರಿ ಕಾಂಗ್ರೆಸ್ ಮುಖ್ಯಸ್ಥರಿಗೆ ಪತ್ರ ಬರೆದ 23 ನಾಯಕರ ಗುಂಪಿನಲ್ಲಿ ಕಮಲ್‌ ಕೂಡಾ ಒಬ್ಬರಾಗಿದ್ದಾರೆ.

Kamal Nath meets Sonia Gandhi amid speculation over his future role in the party

ಮಾಜಿ ಮುಖ್ಯಮಂತ್ರಿಗಳ ಸಭೆಯು ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಮುಂಚಿತವಾಗಿ ನಡೆದಿದೆ. ನಾಥ್ ಕೆಲವು ವಿರೋಧ ಪಕ್ಷಗಳ ಮುಖಂಡರೊಂದಿಗೆ ಉತ್ತಮ ಸಂಬಂಧವನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ವಿರುದ್ಧ ದೊಡ್ಡ ವಿರೋಧ ಪಕ್ಷದ ರಚನೆಯ ಬಗ್ಗೆ ಮಾತುಕತೆಯ ಮಧ್ಯೆ ಎನ್‌ಸಿಪಿ ಮುಖ್ಯಸ್ಥರು ಕೆಲವು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು. ಬಳಿಕ ನಾಥ್ ಇತ್ತೀಚೆಗೆ ಶರದ್ ಪವಾರ್‌ರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿದ್ದರು.

ಈ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಜುಲೈ25 ರಂದು ಮಮತಾ ಬ್ಯಾನರ್ಜಿ ದೆಹಲಿಗೆ ತೆರಳಲಿದ್ದಾರೆ, ಸೋನಿಯಾ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

(ಒನ್‌ಇಂಡಿಯಾ ಸುದ್ದಿ)

English summary
Congress leader and former Madhya Pradesh chief minister Kamal Nath on Thursday met Congress president Sonia Gandhi amid speculation over his future role in the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X