ದೆಹಲಿಯಲ್ಲಿ ಅದ್ದೂರಿಯಾಗಿ ಜರುಗಿದ ಕನಕದಾಸ ರಾಷ್ಟ್ರೀಯ ಜಯಂತ್ಯುತ್ಸವ
ನವದೆಹಲಿ, ಡಿಸಂಬರ್ ೦3: ದಾಸ ಶ್ರೇಷ್ಠ ಸಂತ ಕನಕದಾಸರ ರಾಷ್ಟ್ರೀಯ ಜಯಂತೋತ್ಸವ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಡಿ.2 ರಂದು ಭಾನುವಾರ ಅದ್ದೂರಿಯಾಗಿ ಜರುಗಿತು.
ದೆಹಲಿಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಸಂಘ ದೆಹಲಿ ಕನ್ನಡ ಸಂಘದಲ್ಲಿ ಆಯೋಜಿಸಿದ ಸಮಾರಂಭವನ್ನು ಉದ್ಘಾಟಿಸಿದ ಮಾಜಿ ಸಚಿವರಾದ ಎಚ್.ಎಂ.ರೇವಣ್ಣ ಅವರು ಮಾತನಾಡಿ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರು ತೋರಿದ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ ಎಂದರು.
ರಾಜ್ಯದ ರಾಜಧಾನಿ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಕನಕದಾಸರ ಪ್ರತಿಮೆಯನ್ನು ಕಳೆದ ವರ್ಷ ಉದ್ಘಾಟಿಸಲಾಗಿದ್ದು ರಾಜ್ಯದ ಎಲ್ಲರ ಗಮನ ಸೆಳೆದಿದೆ. ಕನಕದಾಸರ ಕೃತಿಗಳನ್ನು ಸಂರಕ್ಷಿಸುವ ಕಾರ್ಯವಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅರಣ್ಯ ಸಚಿವ ಆರ್. ಶಂಕರ್ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಲಾಯಿತು.
ದೆಹಲಿಯಲ್ಲಿ ಕನಕ ರಾಷ್ಟೀಯ ಜಯಂತಿ ಆಚರಿಸುತ್ತಿರುವುದು ಕನಕದಾಸರ ತತ್ವಗಳು ಇಡೀ ವಿಶ್ವಕ್ಕೆ ವ್ಯಾಪಿಸಿದೆ ಎಂಬುದಕ್ಕೆ ನಿದರ್ಶನ. ಪ್ರತಿ ವರ್ಷ ರಾಷ್ಟ್ರ ಮಟ್ಟದಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುವುದು. ಎಲ್ಲಾ ರಾಜ್ಯಗಳಿಂದ ಕನಕದಾಸರ ಅನುಯಾಯಿಗಳು ಆಗಮಿಸಿ ಈ ಸಮಾರಂಭವನ್ನು ಸಾಕ್ಷೀಕರಿಸಲಿದ್ದಾರೆ ಎಂದರು.
ದೆಹಲಿಯ ಇಂಡಿಯಾ ಗೇಟ್‌ನಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಕನಕದಾಸರ ಅನುಯಾಯಿಗಳು ಡೊಳ್ಳು, ವೀರಗಾಸೆ, ಪಟಕುಣಿತದೊಂದಿಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ ನಡೆಸಿದರು. ಕನಕ ಜಯಂತಿ ಸಮಾರಂಭದಲ್ಲಿ ಸಚಿವರಾದ ಬಂಡೆಪ್ಪ ಖಾಶೆಂಪೂರ, ಜೆ.ಡಿ.ಎಸ್. ರಾಜ್ಯಾಧ್ಯಕ್ಷರಾದ ಹೆಚ್. ವಿಶ್ವನಾಥ, ಸಿ.ಎಸ್. ಶಿವಳ್ಳಿ, ಸೂರಜ್ ಹೆಗಡೆ, ಕಾಂತರಾಜ್ ಸೇರಿದಂತೆ ವಿವಿಧ ರಾಜ್ಯಗಳ ಕುರುಬ ಸಮದಾಯದ ಮುಖಂಡರು ಭಾಗವಹಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications