ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 28ರಂದು ಕನ್ಹಯ್ಯ ಕುಮಾರ್ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 25: ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದು ಖಚಿತವಾಗಿದೆ.

ಇದೇ ತಿಂಗಳು 28ರಂದು ಕನ್ಹಯ್ಯ ಕುಮಾರ್ ಕಾಂಗ್ರೆಸ್‌ಗೆ ಸೇರಿಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕನ್ಹಯ್ಯ ಜತೆ ಜಿಗ್ನೇಶ್ ಮೇವಾನಿ ಕೂಡ ಸೇರ್ಪಡೆಗೊಳ್ಳಲಿದ್ದಾರೆ. ಕನ್ನಯ್ಯ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದರೆ, ಮುಂದಿನ ದಿನಗಳಲ್ಲಿ ವಿರೋಧ ಪಕ್ಷದಲ್ಲಿ ನಾಟಕೀಯ ಬದಲಾವಣೆಯಾಗಬಹುದು ಎನ್ನಲಾಗಿದೆ.

ಕನ್ಹಯ್ಯ ಕುಮಾರ್ 2019 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು, ಆದರೆ ಆಗ ಬಿಜೆಪಿಯ ಗಿರ್‌ರಾಜ್ ಸಿಂಗ್ ವಿರುದ್ಧ ಸೋತರು.ಅಂದಿನಿಂದ ಅವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ.ಈಗ ಅವರು ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

Kanhaiya Kumar To Join Congress On September 28

ಕನ್ಹಯ್ಯ ಅವರನ್ನು ಕಾಂಗ್ರೆಸ್‌ನಲ್ಲಿ ಸೇರಿಸುವುದು ಪಕ್ಷದ ಉನ್ನತ ಮಟ್ಟದಲ್ಲಿ ಗಂಭೀರ ಪರಿಗಣನೆಯಲ್ಲಿದೆ, ಆದರೆ ಅವರು ಹೇಗೆ ಮತ್ತು ಯಾವಾಗ ಸೇರುತ್ತಾರೆ ಎಂಬುದನ್ನು ಅಂತಿಮಗೊಳಿಸಿದೆ.

ಕನ್ಹಯ್ಯ ಕುಮಾರ್ ಅವರನ್ನು ವಿಶೇಷವಾಗಿ ಯುವಕರಲ್ಲಿ ಜನಸೆಳೆಯುವ ನಾಯಕ ಎಂದು ಪರಿಗಣಿಸಲಾಗುತ್ತದೆ. ಆದರೆ ಇದನ್ನು ಕಾಂಗ್ರೆಸ್ ತನ್ನ ಮಿತ್ರಪಕ್ಷ ರಾಷ್ಟ್ರೀಯ ಜನತಾದಳವು ಹೇಗೆ ನೋಡುತ್ತದೆ ಎಂಬುದನ್ನು ಪರಿಗಣಿಸಬೇಕಾಗಿದೆ.

ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕನ್ಹಯ್ಯಗೆ ಮಹತ್ವದ ಜವಾಬ್ದಾರಿ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಅವರನ್ನು ಬಿಹಾರ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ.

ಕನ್ಹಯ್ಯಾ ಕುಮಾರ್ ಜೊತೆಗೆ, ಕಾಂಗ್ರೆಸ್ ಪಕ್ಷವು ಗುಜರಾತ್ ಶಾಸಕರಾದ ಜಿಗ್ನೇಶ್ ಮೇವಾನಿ ಅವರನ್ನು ಕರೆತರಲು ಸಿದ್ಧತೆ ನಡೆಸಿದೆ. ಜಿಗ್ನೇಶ್ ಗುಜರಾತ್ ಕಾಂಗ್ರೆಸ್ ನಲ್ಲಿ ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಮುಂದಿನ ವರ್ಷ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಇದೆ. ಹೀಗಾಗಿ ಹಾರ್ದಿಕ್ ಪಟೇಲ್ ಮತ್ತು ಜಿಗ್ನೇಶ್ ಅವರಂತಹ ಯುವ ನಾಯಕರಿಗೆ ಚುನಾವಣಾ ಪ್ರಚಾರದ ಆಜ್ಞೆಯನ್ನು ನೀಡಬಹುದು.

ನವಜೋತ್ ಸಿಂಗ್ ಸಿಧು ಅವರು ಬಿಜೆಪಿಯನ್ನು ತೊರೆದಾಗ, ಕಾಂಗ್ರೆಸ್ ಅವರನ್ನು ಕರೆದುಕೊಂಡು ಹೋಯಿತು ಮತ್ತು ಇಂದು ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ.

English summary
Former JNU student leader Kanhaiya Kumar will join the Congress party on September 28. Earlier this month, Kanhaiya Kumar had met Rahul Gandhi, sparking rumours of him joining the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X