ಕಾನ್ಪುರ ರೈಲು ದುರಂತ: ಮೃತರಿಗೆ ಪರಿಹಾರ ಘೋಷಣೆ

Posted By:
Subscribe to Oneindia Kannada

ನವದೆಹಲಿ, ನವೆಂಬರ್, 20: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಇಂದೋರ್ ಪಾಟ್ನಾ ಎಕ್ಸ್ ಪ್ರೆಸ್ ರೈಲು ದುರಂತದಲ್ಲಿ ಮೃತ ಪಟ್ಟ ಕುಟುಂಬಗಳಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗು ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.[ಕಾನ್ಪುರ ಬಳಿ ರೈಲು ದುರಂತ, ಸಾವಿನ ಸಂಖ್ಯೆ 100ಕ್ಕೆ ಏರಿಕೆ]

ಇನ್ನು ರೈಲ್ವೆ ಇಲಾಖೆಯಿಂದ ಮೃತ ಕುಟುಂಬಗಳಿಗೆ 3.5ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಸಣ್ಣ ಪ್ರಮಾಣದ ಗಾಯಗಳಾದವರಿಗೆ 25 ಸಾವಿರ ಪರಿಹಾರ ನೀಡುವುದಾಗಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ತಿಳಿಸಿದ್ದಾರೆ.[ಪಾಟ್ನಾ- ಇಂದೋರ್ ರೈಲು ದುರಂತ: ಸಹಾಯವಾಣಿ ಸಂಖ್ಯೆಗಳು]

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸಹ ಮೃತ ವ್ಯಕ್ತಿಯ ಕುಟುಂಬಕ್ಕೆ ರೂ.5ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇನ್ನು ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 25 ಸಾವಿರ ಪರಿಹಾರ ಧನ ನೀಡುವುದಾಗಿ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
PM Narendra Modi announces ex-gratia of Rs 2 lakh each for next of kin of deceased, Rs 50000 for seriously injured in Patna-Indore train derailment
Please Wait while comments are loading...