• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಾಗತಿಕ ಹಸಿವು ಸೂಚ್ಯಂಕ: ಮೋದಿಗೆ ಕಪಿಲ್ ಸಿಬಲ್ 'ಅಭಿನಂದನೆ'

|
Google Oneindia Kannada News

ನವದೆಹಲಿ, ಅಕ್ಟೋಬರ್ 15: ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 101ನೇ ಸ್ಥಾನದಲ್ಲಿದ್ದು, ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ವ್ಯಂಗ್ಯವಾಡಿದ್ದಾರೆ.

ರಾಷ್ಟ್ರದ ಬಡತನ ಹಾಗೂ ಹಸಿವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದ್ದಕ್ಕೆ ಮೋದಿ ಅವರಿಗೆ ಅಬಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ನೇಪಾಳ ರಾಷ್ಟ್ರಗಳಿಗಿಂತ ಭಾರತ ಹಿಂದಿರುವುದನ್ನು ಒತ್ತಿ ಹೇಳಿದ್ದಾರೆ.

ಜಾಗತಿಕ ಹಸಿವು ಸೂಚ್ಯಂಕ 2021: ಭಾರತ ಎಷ್ಟನೇ ಸ್ಥಾನದಲ್ಲಿದೆ?ಜಾಗತಿಕ ಹಸಿವು ಸೂಚ್ಯಂಕ 2021: ಭಾರತ ಎಷ್ಟನೇ ಸ್ಥಾನದಲ್ಲಿದೆ?

ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳ ಪೈಕಿ 101ನೇ ಸ್ಥಾನದಲ್ಲಿ ಭಾರತ ಇದೆ, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ, 76,ಮ್ಯಾನ್ಮಾರ್ 71 ಹಾಗೂ ಪಾಕಿಸ್ತಾನ 92ನೇ ಸ್ಥಾನದಲ್ಲಿದೆ.

ಬಡತನ, ಹಸಿವು, ಭಾರತವನ್ನು ಜಾಗತಿಕ ಶಕ್ತಿಯಾಗಿ ನಿರ್ಮಾಣ ಮಾಡುವುದು, ನಮ್ಮ ಡಿಜಿಟಲ್ ಆರ್ಥಿಕತೆ ಇವೆಲ್ಲಕ್ಕೆ ಧನ್ಯವಾದಗಳು ಎಂದಿದ್ದಾರೆ.

ಜಾಗತಿಕ ಹಸಿವು ಸೂಚ್ಯಂಕ 2021 ಪಟ್ಟಿ ಪ್ರಕಟವಾಗಿದೆ. ಜಾಗತಿಕ ಹಸಿವು ಸೂಚ್ಯಂಕ 2021ರಲ್ಲಿ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ರಿಂದ 101ನೇ ಸ್ಥಾನಕ್ಕೆ ಇಳಿದಿದ್ದು, ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಕೆಳಸ್ಥಾನದಲ್ಲಿದೆ.

ಕಳೆದ ವರ್ಷ 107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ನೇ ಸ್ಥಾನದಲ್ಲಿತ್ತು. ಇದೀಗ 116 ರಾಷ್ಟ್ರಗಳ ಪೈಕಿಯಲ್ಲಿ 101ನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಜಾಗತಿಕ ಹಸಿವು ಸೂಚ್ಯಂಕ ಸ್ಕೋರ್ 2012 ಮತ್ತು 2021 ರ ನಡುವೆ ಶೇ 28.5 ರಿಂದ ಶೇ. 27. 5ಕ್ಕೆ ಕುಸಿದಿದೆ.

ಪಾಕಿಸ್ತಾನ ಈ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕಿಂತ ಮೇಲಿನ ಸ್ಥಾನದಲ್ಲಿದೆ. ಪಾಕಿಸ್ತಾನ 92ನೇ ಸ್ಥಾನದಲಿದ್ದರೆ, ನೇಪಾಳ (76) ಬಾಂಗ್ಲಾದೇಶ (76) ಮತ್ತು ಮಾನ್ಮಾರ್ 71ನೇ ಸ್ಥಾನದಲ್ಲಿದೆ. ಆದರೆ, ಈ ರಾಷ್ಟ್ರಗಳಲ್ಲಿ ಭಾರತಕ್ಕಿಂತ ಕಡಿಮೆ ಪ್ರಮಾಣದ ಹಸಿವಿನ ಸಮಸ್ಯೆಯಿದೆ.

ಚೀನಾ, ಭ್ರಜಿಲ್ ಮತ್ತು ಕುವೈತ್ ಸೇರಿದಂತೆ 18 ರಾಷ್ಟ್ರಗಳು ಐದಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಹಂಚಿಕೊಂಡಿವೆ ಎಂದು ಗ್ಲೋಬಲ್ ಹಂಗರ್ ಇಂಡೆಕ್ಸ್ ( ಜಿಹೆಚ್ ಐ) ವೆಬ್ ಸೈಟ್ ಗುರುವಾರ ಹೇಳಿದೆ.

ಐರಿಶ್ ನೆರವಿನ ಸಂಸ್ಥೆ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನಿಯ ವೆಲ್ಟ್ ಹಂಗರ್ ಹಿಲ್ಫೆ ಸಂಸ್ಥೆ ಜಂಟಿಯಾಗಿ ತಯಾರಿಸಿದ ವರದಿಯಂತೆ ಭಾರತದಲ್ಲಿ ಹಸಿವಿನ ಮಟ್ಟ 'ಆತಂಕಕಾರಿ' ಎಂದು ಬಣ್ಣಿಸಲಾಗಿದೆ.

ಪಾಕಿಸ್ತಾನ ಈ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕಿಂತ ಮೇಲಿನ ಸ್ಥಾನದಲ್ಲಿದೆ. ಪಾಕಿಸ್ತಾನದ ಸ್ಥಾನ 92 ಆಗಿದ್ದರೆ, ನೆರೆಯ ನೇಪಾಳ 76, ಬಾಂಗ್ಲಾದೇಶ 76 ಭಾರತಕ್ಕಿಂತ ಮೇಲಿನ ಸ್ಥಾನಗಳಲ್ಲಿವೆ.

ಸೋಮಾಲಿಯಾದಲ್ಲಿ ಗರಿಷ್ಠ ಹಸಿವಿನ ಸಮಸ್ಯೆಯಿದೆಯೆಂದು ತಿಳಿದುಬಂದಿದ್ದು, ಈ ಪಟ್ಟಿಯಲ್ಲಿ ಈ ದೇಶ ಕೊನೆಯ ಸ್ಥಾನದಲ್ಲಿದೆ. 2000ರಿಂದ ಜಾಗತಿಕ ಹಸಿವಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಪ್ರಗತಿ ನಿಧಾನಗತಿಯಲ್ಲಿದೆ ಎಂದು ವರದಿ ತಿಳಿಸಿದೆ.

ಜಾಗತಿಕ ಹಸಿವು ಸೂಚ್ಯಂಕ ಸ್ಕೋರ್ 2006 ಹಾಗೂ2012ರ ನಡುವೆ 25.1 ರಿಂದ 20.4ಕ್ಕೆ ಕುಸಿದಿದೆ. 2012ರಿಂದೀಚೆಗೆ ಈ ಪ್ರಮಾಣ 2.5 ಅಂಕಗಳಷ್ಟು ಮಾತ್ರ ಕಡಿಮೆಯಾಗಿದೆ. ಈ ವರ್ಷ ಈ ಸೂಚ್ಯಂಕದಲ್ಲಿ ಭಾರತಕ್ಕಿಂತ ಕೆಳಗಿನ ಸ್ಥಾನಗಳಲ್ಲಿ ವಪುವಾ ನ್ಯೂ ಗಿನಿ, ಅಫ್ಘಾನಿಸ್ತಾನ, ನೈಜೀರಿಯಾ, ಕಾಂಗೊ,ಮೊಂಜಂಬಿಕ್, ಸಿಯೆರಾ ಲಿಯೋನ್, ಟಿಮೋರ್ ಲೆಸ್ಟೆ, ಹೈಟಿ, ಲೈಬೀರಿಯಾ, ಮಡಗಾಸ್ಕರ್, ಕಾಂಗೋ ಗಣರಾಜ್ಯ, ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್, ಯೆಮೆನ್ ಹಾಗೂ ಸೋಮಾಲಿಯಾ ಇವೆ.

ಕಳೆದ ವರ್ಷ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 107 ದೇಶಗಳ ಪೈಕಿ 94ನೇ ಸ್ಥಾನದಲ್ಲಿತ್ತು. ವಿಶ್ವದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಎತ್ತರಕ್ಕೆ ಸಮಾನಾದ ತೂಕವನ್ನು ಹೊಂದಿರದ ಮಕ್ಕಳು ಭಾರತದಲ್ಲಿದ್ದಾರೆ.

2016-2020ರ ನಡುವೆ ಎತ್ತರಕ್ಕೆ ಸರಿಯಾದ ತೂಕ ಹೊಂದಿರದ ಮಕ್ಕಳ ಪ್ರಮಾಣ ಶೇ.17.3ರಷ್ಟಿದೆ. 1998-2002ರ ನಡುವೆ ಈ ಪ್ರಮಾಣ ಶೇ. 17.1ರಷ್ಟಿತ್ತು ಎಂದು ಜಿಎಚ್‌ಐ ವರದಿ ಹೇಳಿದೆ.

English summary
Senior Congress leader Kapil Sibal today hit out at Prime Minister Narendra Modi over the country's poor ranking in the Global Hunger Index.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X