'ಸಿಎಂ ಕ್ಲರ್ಕ್' ಮೋದಿ ಹೇಳಿಕೆ: ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನ ಎಂದ ದೇವೇಗೌಡ

ನವದೆಹಲಿ, ಜನವರಿ 12: ರಾಜ್ಯ ಸಮ್ಮಿಶ್ರ ಸರ್ಕಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ವ್ಯಾಖ್ಯಾನಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ರೀತಿ ಕೆಲಸ ಮಾಡುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಪ್ರತಿಕ್ರಿಯಿಸಿದರು.

ಸಿಎಂ ಬಗ್ಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ಮೋದಿ ವ್ಯಾಖ್ಯಾನಿಸಿದ್ದಾರೆ. ಈ ಹಿಂದೆ ಬಿಜೆಪಿ ಜೊತೆ ಹೋದಾಗಲೂ ಕಹಿ ಅನುಭವ ಆಗಿತ್ತು. ಅದರ ಬಗ್ಗೆ ಈಗ ಮಾತನಾಡಲು ಸಾಧ್ಯವೇ? ಅವರಿಂದ ಬೇರೆ ಯಾವ ಪ್ರತಿಕ್ರಿಯೆ ಬರುತ್ತದೆ. ಅವರ ಅನುಕೂಲಕ್ಕೆ ತಕ್ಕಂತೆ ಪ್ರತಿಕ್ರಿಯಿಸಿದ್ದಾರೆ ಎಂದರು.

Karnataka cm clerk modi statement is expediency hd devegowda sp bsp alliance

ಬಿಎಸ್ಪಿ-ಎಸ್ಪಿ ಸೀಟು ಹಂಚಿಕೆ:
ಒಂದೊಂದು ರಾಜ್ಯದಲ್ಲಿ ಒಂದೊಂದು ಪರಿಸ್ಥಿತಿ ಇದೆ. ಅದಕ್ಕೆ ತಕ್ಕಂತೆ ಪ್ರತಿ ರಾಜ್ಯದಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಬಿಎಸ್‌ಪಿಗೆ ಒಂದು ಸೀಟು ನೀಡುವ ಬಗ್ಗೆ ಚರ್ಚೆ ಆಗಿಲ್ಲ ಎಂದು ಎಸ್‌ಪಿ ಮತ್ತು ಬಿಎಸ್ಪಿ ನಡುವಿನ ಸೀಟು ಹೊಂದಾಣಿಕೆ ಒಪ್ಪಂದದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆಯ ಕುರಿತಾಗಿಯೇ ಇನ್ನೂ ಚರ್ಚೆ ಆಗಿಲ್ಲ. ನಾನು 1:3 ಸೂತ್ರವನ್ನು ಮುಂದಿಟ್ಟಿದ್ದೇನೆ. ಸೀಟು ಹಂಚಿಕೆ ಸಮನ್ವಯ ಸಮಿತಿಯಲ್ಲಿ ತೀರ್ಮಾನ ಆಗುವ ಬಗ್ಗೆ ನನಗೆ ತಿಳಿದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಏನಾದರೂ ಹೇಳಿಕೊಳ್ಳಲಿ ಎಂದು ದೇವೇಗೌಡ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+