ಮೈತ್ರಿ ಸರ್ಕಾರ ಕುರಿತು ರಾಹುಲ್‌ಗೆ ವರದಿ ಒಪ್ಪಿಸಿದ ಎಚ್‌ಡಿಕೆ

ಬೆಂಗಳೂರು, ಮೇ 30: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ವಿಷಯ ಕುರಿತು ಚರ್ಚಿಸಿದರು.

ಮೈತ್ರಿ ಸರ್ಕಾರದ ಪ್ರಸಕ್ತ ಪರಿಸ್ಥಿತಿ, ಕಾಂಗ್ರೆಸ್ ಮುಖಂಡರು ಮತ್ತು ಸಚಿವರ ಬಗ್ಗೆ, ಹಾಗೂ ಲೋಕಸಭೆ ಚುನಾವಣೆಯಲ್ಲಿ ಎದುರಾದ ಹೀನಾಯ ಸೋಲಿನ ಬಗ್ಗೆಯೂ ವರದಿ ಒಪ್ಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಹುಲ್ ಗಾಂಧಿ ಅವರಿಗೆ ಸರ್ಕಾರದ ಪ್ರಸ್ತುತ ಸ್ಥಿತಿ ಗತಿಗಳು, ಸರ್ಕಾರ ಉಳಿಸಿಕೊಳ್ಳಲು ಮಾಡಲಾಗುತ್ತಿರುವ ತಂತ್ರಗಳು, ಕಾಂಗ್ರೆಸ್ ಮುಖಂಡರು ಮಾಡುತ್ತಿರುವ ಪ್ರಯತ್ನಗಳ ಬಗ್ಗೆಯೂ ರಾಹುಲ್ ಅವರಿಗೆ ಕುಮಾರಸ್ವಾಮಿ ವರದಿ ನೀಡಿದ್ದಾರೆ.

Karnataka CM Kumaraswamy met Rahul Gandhi in Delhi

ನಂತರ 'ರಾಷ್ಟ್ರ ರಾಜಕಾರಣಕ್ಕೆ ನಿಮ್ಮ ಅಗತ್ಯವಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಗೆ ತೆರಳಿದ್ದರು. ಅಲ್ಲಿಯೇ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+