ನೀತಿ ಸಂಹಿತೆ ಉಲ್ಲಂಘಿಸಿದ ಮೋದಿ: ಅಶೋಕ್ ಗೆಹ್ಲೋಟ್ ಆರೋಪ
ನವದೆಹಲಿ, ಮೇ 12: ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಇದೀಗ ನೇಪಾಳ ಪ್ರವಾಸದಲ್ಲಿದ್ದಾರೆ. ಆದರೆ ನೇಪಾಳ ಪ್ರವಾಸದಲ್ಲಿ ಟೆಂಪಲ್ ರನ್ ಶುರು ಮಾಡಿರುವ ಮೋದಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.
"ಕರ್ನಾಟಕ ವಿಧಾನಸಭೆ ಚುನಾವಣೆ ಇಂದು(ಮೇ 12) ಮತದಾನ ನಡೆಯುತ್ತಿದೆ. ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ. ಅದು ಗೊತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ನೇಪಾಳದಲ್ಲಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಅವರಿಗೆ ದೇವಾಲಯಗಳು ಇಷ್ಟು ದಿನ ಇಲ್ಲದೆ ಈಗ ನೆನಪಾದವೇ? ಎಂದು ಗೆಹ್ಲೋಟ್ ಪ್ರಶ್ನಿಸಿದ್ದಾರೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು(ಮೇ 12) ಮತದಾನ ನಡೆಯುತ್ತಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications