ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಸುಪ್ರೀಂನಲ್ಲಿ ದಾವೆ ಹೂಡಿದ ಮುತಾಲಿಕ್

ನವದೆಹಲಿ, ಮೇ 09: ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯ ವಿರುದ್ಧ ರಾಷ್ಟ್ರೀಯ ಹಿಂದು ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಿದ್ದಾರೆ.

ಈ ಸಂಬಂಧ ಮೇ 10 ರಂದು ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. "ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಿನಲ್ಲಿ ಮತ ಕೇಳಲಾಗುತ್ತಿದೆ. ಆದ್ದರಿಂದ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನೂ ಸ್ಪರ್ಧೆಯಿಂದ ಅನರ್ಹಗೊಳಿಸಬೇಕು" ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

"ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಹಲವು ಯೋಜನೆಗಳನ್ನು ಧರ್ಮದ ಆಧಾರದ ಮೇಲೆ ಹಂಚಲಾಗಿದೆ. ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಮತಕ್ಕಾಗಿ ಪ್ರಣಾಳಿಕೆಯಲ್ಲೂ ಕಾಂಗ್ರೆಸ್ ತಾರತಮ್ಯ ಮೆರೆದಿದೆ. ಇದು ಭಾರತೀಯ ಸಂವಿಧಾನದ ವಿಧಿ 15 ಮತ್ತು 27ರ ಪ್ರಕಾರ ಅಪರಾಧವಾಗುತ್ತದೆ" ಎಂದು ಅವರು ದೂರಿದ್ದಾರೆ.

Karnataka Elections: Petition filed in SC against Congress manifesto

ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದರು. ಈ ಪ್ರಣಾಳಿಕೆಯಲ್ಲಿ, ತಾನು ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+