ಇನ್ನೂ ಐವರು ಅತೃಪ್ತ ಶಾಸಕರ ಮನವಿ ಆಲಿಸಲು ಸುಪ್ರೀಂಕೋರ್ಟ್ ಸಮ್ಮತಿ
ನವದೆಹಲಿ, ಜುಲೈ 15: ಅತೃಪ್ತ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
ರಾಜ್ಯದ ಶಾಸಕರಾದ ಮುನಿರತ್ನ, ಎಂಟಿಬಿ ನಾಗರಾಜ್, ಆನಂದ್ ಸಿಂಗ್, ಡಾ. ಕೆ.ಸುಧಾಕರ್ ಹಾಗೂ ರೋಷನ್ ಬೇಗ್ ಅವರುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಕೊಳ್ಳುವುದಾಗಿ ಕೋರ್ಟ್ ಹೇಳಿದೆ.
ಸ್ಪೀಕರ್ ತಮ್ಮ ರಾಜೀನಾಮೆಯನ್ನು ಸ್ವೀಕರಿಸದಿರುವ ಬಗೆಗೆ ವಿರೋಧ ವ್ಯಕ್ತಪಡಿಸಿ ಹತ್ತು ಶಾಸಕರೊಡನೆ ರಾಜ್ಯದ ಇನ್ನೂ ಐವರು ಶಾಸಕರು ಜುಲೈ 13 ರಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠವು ಬಂಡಾಯ ಶಾಸಕರ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರ ಮನವಿಯನ್ನು ಅಂಗೀಕರಿಸಿದೆ.
ಆಡಳಿತಾರೂಢ ಸಮ್ಮಿಶ್ರ ಸರ್ಕಾರದ 10 ಬಂಡಾಯ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಕುರಿತು ಜುಲೈ 16 ರವರೆಗೆ ಕರ್ನಾಟಕ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿತ್ತು.
ಇದೇ ವೇಳೆ ಉಳಿದ ಶಾಸಕರ ಅರ್ಜಿಯನ್ನು ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ.












Click it and Unblock the Notifications