ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನೂ ಐವರು ಅತೃಪ್ತ ಶಾಸಕರ ಮನವಿ ಆಲಿಸಲು ಸುಪ್ರೀಂಕೋರ್ಟ್‌ ಸಮ್ಮತಿ

|
Google Oneindia Kannada News

ನವದೆಹಲಿ, ಜುಲೈ 15: ಅತೃಪ್ತ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್‌ ಸಮ್ಮತಿ ನೀಡಿದೆ.

ರಾಜ್ಯದ ಶಾಸಕರಾದ ಮುನಿರತ್ನ, ಎಂಟಿಬಿ ನಾಗರಾಜ್, ಆನಂದ್ ಸಿಂಗ್, ಡಾ. ಕೆ.ಸುಧಾಕರ್ ಹಾಗೂ ರೋಷನ್ ಬೇಗ್ ಅವರುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಕೊಳ್ಳುವುದಾಗಿ ಕೋರ್ಟ್ ಹೇಳಿದೆ.

ಕರ್ನಾಟಕ ರಾಜಕೀಯ LIVE: ರಕ್ಷಣೆ ನೀಡಿರೆಂದು ಮುಂಬೈ ಪೊಲೀಸರ ಮೊರೆ ಹೋದ ಅತೃಪ್ತರುಕರ್ನಾಟಕ ರಾಜಕೀಯ LIVE: ರಕ್ಷಣೆ ನೀಡಿರೆಂದು ಮುಂಬೈ ಪೊಲೀಸರ ಮೊರೆ ಹೋದ ಅತೃಪ್ತರು

ಸ್ಪೀಕರ್ ತಮ್ಮ ರಾಜೀನಾಮೆಯನ್ನು ಸ್ವೀಕರಿಸದಿರುವ ಬಗೆಗೆ ವಿರೋಧ ವ್ಯಕ್ತಪಡಿಸಿ ಹತ್ತು ಶಾಸಕರೊಡನೆ ರಾಜ್ಯದ ಇನ್ನೂ ಐವರು ಶಾಸಕರು ಜುಲೈ 13 ರಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

Karnataka political crisis supreme court agrees to hear a plea

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠವು ಬಂಡಾಯ ಶಾಸಕರ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರ ಮನವಿಯನ್ನು ಅಂಗೀಕರಿಸಿದೆ.

ಇಂದೇ ವಿಶ್ವಾಸಮತ ಯಾಚನೆಗೆ ಬಿಜೆಪಿ ಪಟ್ಟು, ಇಕ್ಕಟ್ಟಿನಲ್ಲಿ ಸ್ಪೀಕರ್ ಇಂದೇ ವಿಶ್ವಾಸಮತ ಯಾಚನೆಗೆ ಬಿಜೆಪಿ ಪಟ್ಟು, ಇಕ್ಕಟ್ಟಿನಲ್ಲಿ ಸ್ಪೀಕರ್

ಆಡಳಿತಾರೂಢ ಸಮ್ಮಿಶ್ರ ಸರ್ಕಾರದ 10 ಬಂಡಾಯ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಕುರಿತು ಜುಲೈ 16 ರವರೆಗೆ ಕರ್ನಾಟಕ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿತ್ತು.

ಇದೇ ವೇಳೆ ಉಳಿದ ಶಾಸಕರ ಅರ್ಜಿಯನ್ನು ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ.

English summary
Karnataka political crisis supreme court agrees to hear a plea of 5 more Rebel MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X