ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದ ಕ್ರಮ ಬೆಂಬಲಿಸಿ ಸುಪ್ರೀಂ ಮೆಟ್ಟಿಲೇರಿದ ಕಾಶ್ಮೀರಿ ಪಂಡಿತರು

|
Google Oneindia Kannada News

ನವದೆಹಲಿ, ಅಕ್ಟೋಬರ್ 26: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಕಾಶ್ಮೀರಿ ಪಂಡಿತರು ಮತ್ತು ಸಮುದಾಯದ ವಿವಿಧ ಸಂಘಟನೆಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

ತೇಜ್ ಕುಮಾರ್ ಮೊಜಾ, ಕರೀಷ್ಮಾ ತೇಜ್ ಕುಮಾರ್ ಮೊಜಾ ಮತ್ತು ಅಖಿಲ ಭಾರತ ಕಾಶ್ಮೀರಿ ಸಮಾಜವು ಮಾಡಿದ ಮನವಿಯಲ್ಲಿ, 370 ನೇ ವಿಧಿಯು ಜಮ್ಮು ಮತ್ತು ಕಾಶ್ಮೀರದ ವಿಲಕ್ಷಣ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾದ ಒಂದು ತಾತ್ಕಾಲಿಕ ನಿಬಂಧನೆಯಾಗಿದೆ ಎಂದು ಹೇಳಿದ್ದಾರೆ.

ಕಲಂ 370 ರದ್ದು, ಕಣಿವೆ ರಾಜ್ಯದಲ್ಲಿ ಏನೇನು ಬದಲಾಗಲಿದೆ?ಕಲಂ 370 ರದ್ದು, ಕಣಿವೆ ರಾಜ್ಯದಲ್ಲಿ ಏನೇನು ಬದಲಾಗಲಿದೆ?

ಆಗಸ್ಟ್ 5ರಂದು ಕೇಂದ್ರ ಸರ್ಕಾರವು ತೆಗೆದುಕೊಂಡಿದ್ದ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. 2019ರ ಕಾಯ್ದೆ ಪ್ರಕಾರ ಜಮ್ಮು ಮತ್ತು ಕಾಶ್ಮೀರ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ.

Kashmiri Pandits Seek Intervention In Case Before Supreme Court

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಎರಡು ಕಾಶ್ಮೀರಿ ಪಂಡಿತರು ಮತ್ತು ಸಮುದಾಯ ರಚಿಸಿದ ವಿವಿಧ ಸಂಘಗಳು ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.

ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪಂಚ ನ್ಯಾಯಾಧೀಶರ ಪೀಠವು 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಅರ್ಜಿಗಳ ಮೇಲೆ ಅಫಿಡವಿಟ್ ಸಲ್ಲಿಸಲು ಕೇಂದ್ರ ಮತ್ತು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಅನುಮತಿ ನೀಡಿತ್ತು.

ಜಮ್ಮು ಕಾಶ್ಮೀರದಲ್ಲಿ ಚೀನಾ ಹಾಗೂ ಪಾಕಿಸ್ತಾನದಿಂದ ಒಳನುಸುಳುವಿಕೆ ನಿರಂತರವಾಗಿ ನಡೆಯುತ್ತಿತ್ತು, ಅಲ್ಲಿಯ ಜನರು ನಿತ್ಯ ಆತಂಕದಲ್ಲಿರುವ ಪರಿಸ್ಥಿತಿ ಎದುರಾಗಿತ್ತು, ಈಗ ಒಂದೇ ಆಡಳಿತವಿದೆ. ಕೇಂದ್ರ ಸರ್ಕಾರವು ಇದೆಲ್ಲವುದರ ಮೇಲೆ ನಿಗಾವಹಿಸುತ್ತಿದೆ.

English summary
Two Kashmiri Pandits, Tej Kumar Moza and Karishma Tej Kumar Moza and All India Kashmiri Samaj, an apex body of various associations formed by Kashmiri Pandits have approached the Supreme Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X