ಕತುವಾ ಅತ್ಯಾಚಾರ-ಕೊಲೆ ಪ್ರಕರಣ: ಸುಪ್ರೀಂನಲ್ಲಿಂದು ವಿಚಾರಣೆ
ನವದೆಹಲಿ, ಏಪ್ರಿಲ್ 26: ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
ಜಮ್ಮು ಕಾಶ್ಮೀರದ ಕತುವಾ ಎಂಬಲ್ಲಿ ಜನವರಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ನಂತರ ಆಕೆಯನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.
ಈ ಪ್ರಕರಣ ದೇಶದಾದ್ಯಂತ ಆಕ್ರೋಶ ಹುಟ್ಟಿಸಿತ್ತು. ಈ ಪ್ರಕರಣದ ನಂತರ ಹಲವೆಡೆ ಕೇಳಿಬಂದ ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣದಿಂದಾಗಿ ಎಲ್ಲೆಡೆ ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಕುರಿತು ದನಿ ಎತ್ತಲಾಗಿತ್ತು.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ 12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ನೀಡುವ ಮಹತ್ವದ ನಿರ್ಣಯ ತೆಗೆದುಕೊಂಡು ಪೋಕ್ಸೋ(Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ಮಾಡಿದೆ.












Click it and Unblock the Notifications