ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಹೈಡ್ರಾಮಕ್ಕೆ ತೆರೆ

|
Google Oneindia Kannada News

ನವದೆಹಲಿ, ಜ.22 : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಆಮ್ ಆದ್ಮಿ ಪಕ್ಷದ ಹೈಡ್ರಾಮಕ್ಕೆ ತೆರೆ ಬಿದ್ದಿದೆ. ಇಬ್ಬರು ಪೊಲೀಸ್ ಅಧಿಕಾರಿಗಳನ್ನು ರಜೆ ಮೇಲೆ ಕಳುಹಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆಯನ್ನು ವಾಪಸ್ ಪಡೆದಿದೆ.

ಮಂಗಳವಾರ ನಡೆದ ಹಲವು ನಾಟಕೀಯ ಬೆಳವಣಿಗೆಗಳ ನಂತರ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಾತ್ರಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಇದರಿಂದ ದೆಹಲಿ ಪೊಲೀಸರು ಮತ್ತು ಜನರು ನಿಟ್ಟುಸಿರು ಬಿಟ್ಟಿದ್ದಾರೆ. [ಮಂಗಳವಾರದ ನಾಟಕೀಯ ಬೆಳವಣಿಗೆಗಳು]

Arvind Kejriwal

ಇಬ್ಬರು ಪೊಲೀಸ್ ಅಧಿಕಾರಿಗಳನ್ನು ರಜೆ ಮೇಲೆ ಕಳುಹಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆಯನ್ನು ವಾಪಸ್ ಪಡೆದಿದೆ. ದೆಹಲಿ ಪೊಲೀಸರ ನಿಯಂತ್ರಣಾಧಿಕಾರವನ್ನೂ ಕೇಳಿದ್ದ ಕೇಜ್ರಿವಾಲ್ ಆ ಕುರಿತು ಯಾವುದೇ ಬೇಡಿಕೆ ಇಡದೆ ಧರಣಿಯನ್ನು ಮುಕ್ತಾಯಗೊಳಿಸಿರುವುದು ಅಚ್ಚರಿ ಮೂಡಿಸಿದೆ.[ದೆಹಲಿ ಅರಾಜಕತೆ ಕಿರಣ್ ಬೇಡಿ ಸಂದರ್ಶನ]

ಸಚಿವ ಸೋಮನಾಥ್ ಭಾರತಿ ಅವರ ನಿರ್ದೇಶನದ ಮೇರೆಗೆ ವೇಶ್ಯಾವಾಟಿಕೆ ಹಾಗೂ ಮಾದಕ ದ್ರವ್ಯ ಜಾಲದ ಮೇಲೆ ಕ್ರಮ ಕೈಗೊಳ್ಳಲು ನಿರಾಕರಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ರೈಲ್ವೆ ಭವನದ ಮುಂದೆ ಸೋಮವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರು.

ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಗಣರಾಜ್ಯೋತ್ಸವ ಆಚರಣೆಗೆ ಅಡ್ಡಿ ಪಡಿಸುವುದಾಗಿಯೂ ಪಕ್ಷದ ಕಾರ್ಯಕರ್ತರು ಬೆದರಿಕೆ ಹಾಕಿದ್ದರು. ಮಂಗಳವಾರ ರಾತ್ರಿ ಸಿಎಂ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅವರು ಧರಣಿ ಅಂತ್ಯಗೊಳಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.

ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ಭೇಟಿ ಮಾಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷದ ಬೇಡಿಕೆಯನ್ನು ಈಡೇರಿಸಲು ಲೆ.ಗವರ್ನರ್ ಭಾಗಶಃ ಒಪ್ಪಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಿಲ್ಲಿಸಿದೆವು ಎಂದು ಹೇಳಿದ್ದಾರೆ. ಕರ್ತವ್ಯ ಪಾಲಿಸದ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಾವು ಆಗ್ರಹಿಸಿದ್ದೆವು. ಆದರೆ ನಿರ್ಲಕ್ಷ್ಯಪ್ರಕರಣದ ನ್ಯಾಯಾಂಗ ತನಿಖೆ ಬಾಕಿ ಇರುವಂತೆಯೇ ಇಬ್ಬರು ಅಧಿಕಾರಿಗಳನ್ನು ರಜೆ ಮೇಲೆ ಕಳುಹಿಸಲಾಗಿದೆ. ಪ್ರತಿಭಟನೆ ನಿಲ್ಲಿಸೋಣ. ಇದು ದಿಲ್ಲಿ ಜನರ ವಿಜಯ ಎಂದು ಕೇಜ್ರಿವಾಲ್ ಘೋಷಿಸಿದರು.

English summary
Delhi chief minister Arvind Kejriwal on Tuesday, Jan 21 called off his protest after Lieutenant-Governor Najeeb Jung appealed the stir be ended keeping in mind the issue of national security ahead of Republic Day celebrations. The L-G partially agreed to the demands raised by the Aam Aadmi Party (AAP).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X