ಅಣ್ಣಾ ಜೊತೆ ಕೈ ಜೋಡಿಸಿದ ಕೇಜ್ರಿವಾಲ್

ನವದೆಹಲಿ, ಫೆ. 24 : ವಿವಾದಿತ ಭೂ ಸ್ವಾಧೀನ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಪ್ರತಿಭಟನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೈ ಜೋಡಿಸಿದ್ದಾರೆ.

ದೆಹಲಿಯ ಜಂತರ್-ಮಂತರ್‌ನಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಭೂ ಸ್ವಾಧೀನ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಂಗಳವಾರ ಮಧ್ಯಾಹ್ನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

anna hazare

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಕೇಂದ್ರ ಸರ್ಕಾರ ಪ್ರಾಪರ್ಟಿ ಡೀಲರ್ ಎಂದು ಆರೋಪಿಸಿದರು. ರೈತರ ಭೂಮಿ ಕಿತ್ತುಕೊಳ್ಳುವ ಕೇಂದ್ರ ಸರ್ಕಾರಕ್ಕೆ ಜನರು ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರದಲ್ಲಿ ಹಿಂದೆ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ತುಂಬಾ ಅಹಂಕಾರವಿತ್ತು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜನರು ತಕ್ಕಪಾಠ ಕಲಿಸಿದ್ದಾರೆ. ಸದ್ಯ ನರೇಂದ್ರ ಮೋದಿ ಅವರ ಸರ್ಕಾರ ಕಾಂಗ್ರೆಸ್‌ ಪಕ್ಷಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದೆ. ಆದ್ದರಿಂದ ಜನರು ಮೋದಿ ಸರ್ಕಾರಕ್ಕೂ ಪಾಠ ಕಲಿಸಲಿದ್ದಾರೆ ಎಂದರು.

Arvind Kejriwal

ಸಂಸತ್ತಿನಲ್ಲೂ ಗದ್ದಲ : ಭೂ ಸ್ವಾಧೀನ ಕಾಯ್ದೆ ವಿರುದ್ಧ ಸಂಸತ್ತಿನಲ್ಲಿಯೂ ಪ್ರತಿಪಕ್ಷಗಳು ಧರಣಿ ನಡೆಸಿದವು. ತೀವ್ರ ವಿರೋಧದ ನಡೆವೆಯೂ ಮಸೂದೆಯನ್ನು ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. ಉದ್ದೇಶಿತ ಮಸೂದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್ ಧರಣಿ ನಡೆಸಿತು ಮತ್ತು ಸಭಾತ್ಯಾಗ ಮಾಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+