ಸಿಎಂ ಗದ್ದುಗೆ ಏರಲು ಮೆಟ್ರೋದಲ್ಲಿ ಬರ್ತಾರೆ ಕೇಜ್ರಿವಾಲ್!

ನವದೆಹಲಿ, ಡಿ. 27 : ಈಗಾಗಲೇ ಸರ್ಕಾರಿ ಗೂಟದ ಕಾರು, ಜೆಡ್ ಪ್ಲಸ್ ಭದ್ರತೆ ಬೇಡ ಎಂದು ಹೇಳಿರುವ ದೆಹಲಿ ನಿಯೋಜಿತ ಸಿಎಂ ಅರವಿಂದ್ ಕೇಜ್ರಿವಾಲ್, ಶನಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ಶಾಸಕರೊಂದಿಗೆ ಮೆಟ್ರೋದಲ್ಲಿ ಆಗಮಿಸುವುದಾಗಿ ಘೋಷಿಸಿದ್ದಾರೆ. ಶನಿವಾರ ರಾಮ್ ಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಭದ್ರತೆ ಮತ್ತು ಸರ್ಕಾರಿ ಸವಲತ್ತಿನ ಹೆಸರಿನಲ್ಲಿ ಜನತೆಯ ಹಣ ಪೋಲು ಮಾಡುವ ಜನಪ್ರತಿನಿಧಿಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ದಿಟ್ಟ ಹೆಜ್ಜೆ ಇಟ್ಟಿದ್ದು, ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಯಾವುದೇ ಸರ್ಕಾರಿ ವಾಹನ, ಭದ್ರತೆ ಪಡೆಯದೇ ದೆಹಲಿಯ ಮೆಟ್ರೋ ರೈಲಿನಲ್ಲಿ ಆಗಮಿಸಲಿದ್ದಾರೆ.

Arvind Kejriwal

ಅರವಿಂದ್ ಕೇಜ್ರಿವಾಲ್ ಮತ್ತು ಇತರ 27 ಶಾಸಕರು ಕೌಸಂಬಿ ಮೆಟ್ರೋ ರೈಲು ನಿಲ್ದಾಣದಿಂದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ರಾಮ್ ಲೀಲಾ ಮೈದಾನಕ್ಕೆ ಮೆಟ್ರೋ ರೈಲಿನಲ್ಲಿಯೇ ಆಗಮಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಯಾವುದೇ ವಿಐಪಿ ಪಾಸ್ ಗಳನ್ನು ಇಟ್ಟಿಲ್ಲ ಎಲ್ಲಾ ಜನರು ಮುಕ್ತವಾಗಿ ಪಾಲ್ಗೊಳ್ಳಬಹುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಶನಿವಾರ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಅಣ್ಣಾ ಹಜಾರೆ, ಕಿರಣ್ ಬೇಡಿ, ಕರ್ನಾಟಕದ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಇವರಿಗೆ ಮಾತ್ರ ಆಸನದ ವ್ಯವಸ್ಥೆ ಕಲ್ಪಿಸುವಂತೆ ಕೇಜ್ರಿವಾಲ್ ಅಧಿಕಾರಿಗಳಿ ಮನವಿ ಮಾಡಿದ್ದಾರೆ. ಉಳಿದಂತೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಒದಗಿಸಲಾಗಿದೆ.

ಶನಿವಾರ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಉಳಿದಂತೆ 6 ಜನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ದೆಹಲಿಗೆ ನಾನು ಸಿಎಂ ಅಲ್ಲ, ಜನರೇ ಸಿಎಂ ಎಂದು ಈಗಾಗಲೇ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+