• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

|

ನವದೆಹಲಿ, ಮೇ 1: ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉತ್ತರ ಪ್ರದೇಶದ ಮಥುರಾ ಕಾರಾಗೃಹದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

"ಶುಕ್ರವಾರ ಬೆಳಗ್ಗೆ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ. ಅವರ ಜೊತೆಗೆ ಜೈಲಿನ ವೈದ್ಯಾಧಿಕಾರಿ ಹಾಗೂ ಡೆಪ್ಯುಟಿ ಜೈಲರ್ ತೆರಳಿದ್ದಾರೆ" ಎಂದು ಮಧುರಾ ಕಾರಾಗೃಹದ ಹಿರಿಯ ವರಿಷ್ಠಾಧಿಕಾರಿ ಶೈಲೇಂದ್ರ ಮೈತ್ರಿ ತಿಳಿಸಿದ್ದಾರೆ.

ರಸ್ತೆಯಲ್ಲೇ ಸಾವು, ಪಾದಾಚಾರಿ ಮಾರ್ಗವೇ ಹಾಸಿಗೆ: ಇದು ಕೊರೊನಾ ತಂದಿತ್ತ ಪರಿಸ್ಥಿತಿ ರಸ್ತೆಯಲ್ಲೇ ಸಾವು, ಪಾದಾಚಾರಿ ಮಾರ್ಗವೇ ಹಾಸಿಗೆ: ಇದು ಕೊರೊನಾ ತಂದಿತ್ತ ಪರಿಸ್ಥಿತಿ

ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ಹೆಚ್ಚಾಗಿತ್ತು. ಅವರು ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಬುಧವಾರ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.

ಕಳೆದ ವಾರವಷ್ಟೇ ಕೊರೊನಾವೈರಸ್ ಸೋಂಕು:

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಮಥುರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕಳೆದ ವಾರವಷ್ಟೇ ಕೊವಿಡ್-19 ನೆಗಟಿವೆ ವರದಿ ಬಂದ ಹಿನ್ನೆಲೆ ಮಥುರಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.

English summary
Kerala Journalist Siddique Kappan Is Shifted To Delhi's AIIMS Hospital From Mathura Prison.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X