ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದ ಮಲ್ಲಿಕಾರ್ಜುನ ಖರ್ಗೆ
ಲೋಕಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ದೆಹಲಿಯ ಏಮ್ಸ್ ನಲ್ಲಿ ಮಂಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ನವದೆಹಲಿ, ಜೂನ್ 5: ಲೋಕಸಭೆಯ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಂಡಿಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾದ ಖರ್ಗೆಯವರಿಗೆ ವೈದ್ಯರ ತಂಡವೊಂದು ಶಸ್ತ್ರಚಿಕಿತ್ಸೆ ನಡೆಸಿದ್ದು, ಶೀಘ್ರದಲ್ಲೇ ಅವರು ಗುಣಮುಖ ಹೊಂದಲಿದ್ದಾರೆಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ದೀರ್ಘಕಾಲದಿಂದ ಅವರು, ಮಂಡಿನೋವಿನಿಂದ ಬಳಲುತ್ತಿದ್ದ ಖರ್ಗೆ, ಇತ್ತೀಚೆಗೆ ವೈದ್ಯರ ಮೊರೆ ಹೋಗಿದ್ದರು. ಅವರಿಗೆ ತಪಾಸಣೆ ನಡೆಸಿದ್ದ ವೈದ್ಯರು ಮಂಡಿ ಶಸ್ತ್ರಚಿಕಿತ್ಸೆಗೆ ಸಲಹೆ ಮಾಡಿದ್ದರು.












Click it and Unblock the Notifications