ಮಮತಾ ಬ್ಯಾನರ್ಜಿ ಭೇಟಿ ಬಳಿಕ ಸ್ವಾಮಿ ನೀಡಿದ ಪ್ರತಿಕ್ರಿಯೆಯೇನು?
ನವದೆಹಲಿ, ನವೆಂಬರ್ 24: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಲಿದ್ದಾರೆ ಎಂಬ ಸುದ್ದಿ ಈ ದಿನದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಮಮತಾರನ್ನು ಭೇಟಿ ಮಾಡಿರುವುದನ್ನು ಖಚಿತಪಡಿಸಿದ ಸ್ವಾಮಿ ನೀಡಿದ ಪ್ರತಿಕ್ರಿಯೆ ಹೇಗಿತ್ತು? ಮುಂದೆ ಓದಿ...
ದೆಹಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ, ಮಮತಾ ಸಂಬಂಧಿಕ ಅಭಿಷೇಕ್ ಬ್ಯಾನರ್ಜಿ ಅಧಿಕೃತ ನಿವಾಸದಲ್ಲಿ ಮಧ್ಯಾಹ್ನ 3.30ಕ್ಕೆ ಉಭಯ ನಾಯಕರ ನಡುವೆ ಸಭೆ ನಡೆದಿದೆ. ಇದಕ್ಕೂ ಮುನ್ನ ಮಂಗಳವಾರದಂದು ಕೋಲ್ಕತ್ತಾದಲ್ಲಿದ್ದ ಸುಬ್ರಮಣಿಯನ್ ಸ್ವಾಮಿ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಿದ್ದರು.
ಸ್ವಾಮಿ ಪ್ರತಿಕ್ರಿಯೆ: ದೆಹಲಿಯಲ್ಲಿ ಮಮತಾ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಮುಂದೆ ಕಾಣಿಸಿಕೊಂಡ ಸುಬ್ರಮಣಿಯನ್ ಸ್ವಾಮಿ ಅವರಿಗೆ ಮೊದಲಿಗೆ ಎದುರಾದ ಪ್ರಶ್ನೆ: ನೀವು ತೃಣಮೂಲ ಕಾಂಗ್ರೆಸ್ ಸೇರುತ್ತಿದ್ದಿರಾ?. ಇದಕ್ಕೆ ನಗುತ್ತಾ ಉತ್ತರಿಸಿದ ಸ್ವಾಮಿ, ನಾನು ಯಾವಾಗಲೂ ಮಮತಾ ಜೊತೆಗಿದ್ದೆ, ಮಮತಾ ಪಕ್ಷ ಸೇರುವ ಅಗತ್ಯ ಇಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಸಂಜೆ 5 ಗಂಟೆಗೆ ಮಮತಾ ಬ್ಯಾನರ್ಜಿ ಅವರು ಭೇಟಿ ಮಾಡಲು ಸಮಯ ನಿಗದಿಯಾಗಿದೆ. ಪಶ್ಚಿಮ ಬಂಗಾಳದ ವಿವಿಧ ಯೋಜನೆ, ಕೇಂದ್ರದ ಅನುದಾನ, ತ್ರಿಪುರಾ ಹಿಂಸಾಚಾರ ಹಾಗೂ ಮುಖ್ಯವಾಗಿ ಬಿಎಸ್ಎಫ್ ಗಡಿ ವಿವಾದ ಬಗ್ಗೆ ಮಾತನಾಡಲಿದ್ದಾರೆ ಎಂದು ಟಿಎಂಸಿ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಸುಬ್ರಮಣಿಯನ್ ಸ್ವಾಮಿ ಅವರನ್ನು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಹೊರಗಿಡಲಾಗಿದೆ. ಇದಾದ ಬಳಿಕ ಮಮತಾ ಸರ್ಕಾರದ ಆಡಳಿತವನ್ನು ಸ್ವಾಮಿ ಹೊಗಳಿದ್ದರು. ಕೇಂದ್ರ ಸರ್ಕಾರವನ್ನು ಟ್ವೀಟ್ ಮೂಲಕ ಆಗಾಗ ತಿವಿಯುತ್ತಲೇ ಇದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ರೋಮ್‌ಗೆ ಭೇಟಿ ನೀಡಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಸ್ವಾಮಿ ಟೀಕಿಸಿದ್ದರು.
Subramanian Swamy with West Bengal CM Mamata Banerjee after their meeting in Delhi. @IndianExpress pic.twitter.com/1tKDDEbIQl
— Sourav Roy Barman (@Sourav_RB) November 24, 2021
ಮಮತಾ ಹಿಂದೂ ಹಾಗೂ ದುರ್ಗಾ ಮಾತೆ ಭಕ್ತೆ, ಆಕೆಯ ರಾಜಕೀಯ ನಡೆ ವಿಭಿನ್ನ, ನಾವು ಚುನಾವಣೆಯನ್ನು ವೈಯಕ್ತಿಕವಾಗಿ ಎದುರಿಸಲಾಗದು ಎಂದು ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿ ಸ್ವಾಮಿ ಹೇಳಿದ್ದರು.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಘೋಷಣೆಯನ್ನು ಅವರು ಸ್ವಾಗತಿಸಿದ್ದರು.
"ಕಳೆದ ಒಂದು ವರ್ಷಗಳ ಕಾಲ ಬಿಸಿಲು ಹಾಗೂ ಮೈಕೊರೆಯುವ ಚಳಿ ನಡುವೆ ಶಾಂತಿಯುತ ಸತ್ಯಾಗ್ರಹ ನಡೆಸಿದ ರೈತರ ಸಂಕಷ್ಟಗಳನ್ನು ನಿವಾರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಧಾರದಿಂದ ನನಗೆ ತುಂಬಾ ಸಂತೋಷವಾಗುತ್ತಿದೆ. ಆದರೆ ಎನ್‌ಇಸಿಯಲ್ಲಿ ನಿರ್ಣಯವನ್ನು ಅಂಗೀಕರಿಸದಿರಲು ಬಿಜೆಪಿ ಪ್ರಾಯಶ್ಚಿತ್ತ ಪಡಬೇಕಾಗಿದೆ," ಎಂದು ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಕೂ ಮಾಡಿದ್ದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications