ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಮಲ್ ನಾಥ್ ಜತೆ ಕೋವಿಡ್ ಬಗ್ಗೆ ಡಿ.ಕೆ. ಶಿವಕುಮಾರ್ ಸಮಾಲೋಚನೆ

|
Google Oneindia Kannada News

ನವದೆಹಲಿ, ಆಗಸ್ಟ್ 5: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಕರ್ನಾಟಕ, ಮಧ್ಯಪ್ರದೇಶ ರಾಜ್ಯಗಳಲ್ಲಿನ ಕೋವಿಡ್ ದುಸ್ಥಿತಿ ಕುರಿತು ಚರ್ಚೆ ನಡೆಸಿದರು.

ದೆಹಲಿ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಕಮಲ್ ನಾಥ್ ಅವರೊಂದಿಗೆ, ಉಭಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಪರಿಸ್ಥಿತಿಯ ಸತ್ಯಾಂಶ ಮುಚ್ಚಿಟ್ಟು, ಸುಳ್ಳು ಮಾಹಿತಿ ಮೂಲಕ ಜನರನ್ನು ದಾರಿತಪ್ಪಿಸುತ್ತಿರುವ ಬಗ್ಗೆ ಸಮಾಲೋಚನೆ ನಡೆಸಿದರು.

ಕೋವಿಡ್ ಸಾವಿನ ಪ್ರಮಾಣ ಕುರಿತು ಸರ್ಕಾರಗಳು ಸುಳ್ಳು ಲೆಕ್ಕ ನೀಡುತ್ತಿವೆ. ಸರ್ಕಾರ ಹೇಳುತ್ತಿರುವ ಅಂಕಿ-ಅಂಶಕ್ಕೂ ಚಿತಾಗಾರದಲ್ಲಿ ಅಂತ್ಯಸಂಸ್ಕಾರಗೊಂಡ ಶವಗಳ ಸಂಖ್ಯೆಗೂ ಅಜಗಜಾಂತರವಿದೆ. ಕೋವಿಡ್ ನಿಂದ ಸತ್ತವರ ಮಾಹಿತಿಯನ್ನು ಸ್ಮಶಾನ, ಚಿತಾಗಾರಗಳಿಂದ ಪಡೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶವನ್ನು ಶಿವಕುಮಾರ್ ಅವರು ಗಮನಕ್ಕೆ ತಂದರು.

KPCC president DK Shivakumar Meets Former MP CM Kamal Nath

ಬೆಂಗಳೂರು ಹಾಗೂ ಕರ್ನಾಟಕ ಮೆಡಿಕಲ್ ಟೂರಿಸಂ, ಐಟಿ ಹಬ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಆದರೆ ಬಿಜೆಪಿ ಸರ್ಕಾರಗಳು ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿದ್ದು, ಜಾಗತಿಕ ಮಟ್ಟದಲ್ಲಿ ರಾಜ್ಯದ ಘನತೆ-ಗೌರವ ನಾಶವಾಗಿದೆ. ಕೆಲವು ದೇಶಗಳು ಇಲ್ಲಿಂದ ಹೋಗುವವರಿಗೆ ನಿರ್ಬಂಧ ಹೇರಿವೆ. ಇಲ್ಲಿನ ಸರ್ಕಾರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದರು.

ಕೋವಿಡ್ ಸಮಯದಲ್ಲಿ ಬಿಜೆಪಿಯ ಸ್ವಾರ್ಥ ರಾಜಕಾರಣ, ದುರಾಡಳಿತ, ಭ್ರಷ್ಟಾಚಾರದಿಂದ ರೈತರು, ಕಾರ್ಮಿಕರ ಬದುಕು ಬೀದಿಪಾಲಾಗಿದೆ. ಅವರಿಗೆ ಸರ್ಕಾರದಿಂದ ಸೂಕ್ತ ನೆರವು ಸಿಕ್ಕಿಲ್ಲ ಎಂದೂ ಹೇಳಿದರು.

ಸಂಕಷ್ಟದಲ್ಲಿರುವ ಜನರ ರಕ್ಷಣೆಗೆ ಕಾಂಗ್ರೆಸ್ ಯಾವ ರೀತಿ ಕಾರ್ಯಕ್ರಮ ವಿಸ್ತರಿಸಬಹುದು ಎಂಬ ವಿಚಾರವಾಗಿಯೂ ಉಭಯ ನಾಯಕರು ಚರ್ಚೆ ನಡೆಸಿದರು.

ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಅದರ ಪರಿಣಾಮ ಕಂಡುಬರುತ್ತಿದೆ. ನಿನ್ನೆಗಿಂತ ಇಂದು ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಗಡಿಗಳಲ್ಲಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

KPCC president DK Shivakumar Meets Former MP CM Kamal Nath

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 1785 ಕೊರೊನಾ ಸೋಂಕು ಪತ್ತೆಯಾಗಿದ್ದು, 1651 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25 ಆಗಿದ್ದು, ಸಾವಿನ ಪ್ರಮಾಣ ಕೊಂಚ ಕಡಿಮೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 29,13,512ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ- 36,705 ಆಗಿದೆ. ಇಲ್ಲಿಯವರೆಗೆ ಒಟ್ಟು 28,52,368 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕರ್ನಾಟಕದಲ್ಲಿ ಪಾಸಿಟಿವಿಟಿ ದರ ಶೇ. 1.10ಕ್ಕೆ ಇಳಿಕೆಯಾಗಿದ್ದು, ಕೋವಿಡ್ 19 ಡೆತ್ ರೇಟ್ ಶೇ.1.40ರಷ್ಟಾಗಿದೆ. ಇದು ನಿನ್ನೆಯ ವರದಿಗಿಂತ ಕಡಿಮೆಯಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ವರದಿ ಮಾಡಿದೆ.

ಸಾರ್ವಜನಿಕರಿಗೆ ಮನವಿ: ಕೋವಿಡ್- 19 ಸೋಂಕಿತ ವ್ಯಕ್ತಿಯೊಂದಿಗೆ ವೈಯಕ್ತಿಕ ಸಂಪರ್ಕ ಹೊಂದಿದ್ದಲ್ಲಿ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು ಹಾಗೂ ರೋಗ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳುವುದು ಅಥವಾ 14410 ಆಪ್ತಮಿತ್ರ ಆರೋಗ್ಯ ಸಹಾಯವಾಣಿಗೆ ಕರೆಮಾಡಬೇಕೆಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ವೇಳೆ ಮಧ್ಯಪ್ರದೇಶದಲ್ಲಿ 7.92 ಲಕ್ಷ ಪ್ರಕರಣಗಳಿದ್ದು, 10,513 ಮಂದಿ ಮೃತಪಟ್ಟಿದ್ದಾರೆ. 7.8 ಲಕ್ಷ ಮಂದಿ ಚೇತರಿಕೆ ಹೊಂದಿದ್ದಾರೆ. ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.43%ಗೆ ಮತ್ತು ದೈನಂದಿನ ಪಾಸಿಟಿವಿಟಿ ದರ 2.44%ಗೆ ಇಳಿದಿದೆ. ದೈನಂದಿನ ಪಾಸಿಟಿವಿಟಿ ದರ ಸತತ 53 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.

English summary
KPCC president DK Shivakumar today had meeting with Former Madhya Pradesh CM Kamal Nath and discussed about Covid 19 situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X