ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾ ಭೇಟಿ ಬಳಿಕವೂ ದೆಹಲಿಯಲ್ಲೇ ಉಳಿದಿದ್ದೇಕೆ ಸಿದ್ದರಾಮಯ್ಯ?

|
Google Oneindia Kannada News

ನವದೆಹಲಿ, ಜನವರಿ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಸಾರಥ್ಯವನ್ನು ಯಾರಿಗೆ ವಹಿಸಬೇಕು ಎಂಬುದರ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಸಮಯ ನಿಗದಿಯಾಗದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ.

ಜನವರಿ.14ರಂದು ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಜಾತಿವಾರು, ಪ್ರದೇಶವಾರು ಯಾರಿಗೆ ಪಟ್ಟ ಕಟ್ಟಿದರೆ ಸೂಕ್ತ ಎಂಬುದರ ಬಗ್ಗೆ ಸಲಹೆ ನೀಡಿದರು.

ಡಿಕೆಶಿಗೆ ಸಿದ್ದು ಕೊಡ್ತಾರಾ ಡಿಚ್ಚಿ? ಎಂ.ಬಿ.ಪಾಟೀಲ್ ಗೆ ಪಟ್ಟದ ಖುಷಿ?ಡಿಕೆಶಿಗೆ ಸಿದ್ದು ಕೊಡ್ತಾರಾ ಡಿಚ್ಚಿ? ಎಂ.ಬಿ.ಪಾಟೀಲ್ ಗೆ ಪಟ್ಟದ ಖುಷಿ?

ಮೊದಲಿಗೆ ಕೆಪಿಸಿಸಿ ಅಧ್ಯಕ್ಷರ ರೇಸ್ ನಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರು ಕೇಳಿ ಬಂದಿತ್ತು. ಆದರೆ, ತಮ್ಮ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಬಬಲೇಶ್ವರದ ಶಾಸಕ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲರಿಗೆ ಕೆಪಿಸಿಸಿ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಲಾಬಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

 KPCC President: Ex-Cm Siddaramaiah Return To Bangalore After Meet Rahul Gandhi

ರಾಹುಲ್ ಗಾಂಧಿ ಭೇಟಿ ಬಳಿಕ ಬೆಂಗಳೂರಿಗೆ ವಾಪಸ್:

ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಚರ್ಚೆಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ, ರಾಹುಲ್ ಗಾಂಧಿ ಭೇಟಿಗೆ ಇದುವರೆಗೂ ಸಮಯ ನಿಗದಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜನವರಿ.14ರ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನ ಹಿರಿಯ ನಾಯಕರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಸಭೆಗಳನ್ನು ನಡೆಸಿದರು. ಶಾಸಕ ಎಂ.ಬಿ.ಪಾಟೀಲ್ ಗೆ ಕೆಪಿಸಿಸಿ ಪಟ್ಟ ಕಟ್ಟುವುದಕ್ಕಾಗಿ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಮೂಲಕ ಲಾಬಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

English summary
KPCC President: Ex-Chief Minister Siddaramaiah Return To Bangalore After Meet AICC Ex-President Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X