ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಸಿದ್ದರಾಮಯ್ಯರಿಗೇ ಗೊತ್ತಿಲ್ವಾ?

|
Google Oneindia Kannada News

ನವದೆಹಲಿ, ಜನವರಿ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ನೇಮಕ ಯಾವಾಗ ಆಗುತ್ತೋ ಗೊತ್ತಿಲ್ಲ ಎಂದು ಹೇಳಿದರು. ರಾಜ್ಯ ರಾಜಕಾರಣದ ಸ್ಥಿತಿಗತಿ ಬಗ್ಗೆ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದೇನೆ ಎಂದರು.

"ಹರ.. ಹರ.. ಮುಖ್ಯಮಂತ್ರಿ ಯಡಿಯೂರಪ್ಪರನ್ನೇ ಬೆದರಿಸುವುದೇ ಸ್ವಾಮೀಜಿ?"

ಕರ್ನಾಟಕದಲ್ಲಿ ಈಗಿನ ರಾಜಕೀಯ ಪರಿಸ್ಥಿತಿಗೆ ತಕ್ಕಂತೆ ಯಾರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬುದರ ಬಗ್ಗೆ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

 KPCC President: No Idea For High Command Announcement

ಈ ಬಾರಿಯೂ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ:

ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿ ಕೊಟ್ಟಿದ್ದೇನೆ. ಯಾರು ಕೆಪಿಸಿಸಿ ಅಧ್ಯಕ್ಷರಾದರೆ ಉತ್ತಮ ಎಂಬ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಆದರೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಅಧಿಕೃತ ಘೋಷಣೆ ಯಾವಾಗ ಎಂಬುದರ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದರು.

 KPCC President: No Idea For High Command Announcement

ಇನ್ನು, ಕಳೆದ ಬಾರಿಯಂತೆ ಈ ಬಾರಿಯೂ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಕಾರ್ಯಾಧ್ಯಕ್ಷರು ಕೆಲಸ ಮಾಡಿಕೊಂಡು ಹೋಗಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

English summary
KPCC President: "No Idea For High Command Announcement". Ex-Chief Minister Siddaramaiah Said After Meet AICC Ex-President Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X