ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಸಂಬಂಧ ಆರೋಪ, ಕುಮಾರ್ ವಿಶ್ವಾಸ್‌ಗೆ ನೋಟಿಸ್

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಮೇ 4 : ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್‌ ಅವರಿಗೆ ದೆಹಲಿ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

2014ರ ಲೋಕಸಭೆ ಚುನಾವಣೆ ವೇಳೆಯಲ್ಲಿ ಕುಮಾರ್ ವಿಶ್ವಾಸ್ ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂಬುದು ಆರೋಪವಾಗಿದೆ. ಲೋಕಸಭೆ ಚುನಾವಣೆಗೆ ಕುಮಾರ್ ವಿಶ್ವಾಸ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

Kumar Vishwas

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಬಾರ್ಖಾ ಶುಕ್ಲಾ ಅವರು ಈ ನೋಟಿಸ್ ಜಾರಿಗೊಳಿಸಿದ್ದಾರೆ. ಎರಡು ದಿನದಲ್ಲಿ ಈ ಕುರಿತು ವಿವರಣೆ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ. [ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ, ಮೂರು ಪ್ರಶ್ನೆಗಳು]

ವಿಶ್ವಾಸ್ ವಿರುದ್ಧ ದೂರು : ಅಜಯ್ ವೋಹರಾ ಎನ್ನುವವರು ಅಮೇಥಿಯಲ್ಲಿನ ಆಪ್ ಕಾರ್ಯಕರ್ತೆ ಜೊತೆ ಕುಮಾರ್ ವಿಶ್ವಾಸ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರಿಗೆ ದೂರು ನೀಡಿದ್ದರು. ಈ ಕುರಿತು ಸರಣಿ ಇ ಮೇಲ್‌ಗಳನ್ನು ಕಳಿಸಿದ್ದರು. [ಕೇಜ್ರಿ ಟೀಕಿಸಿ, ಮೋದಿ ಹೊಗಳಿದ 'ಎಎಪಿ' ಕುಮಾರ]

ಆದರೆ, ಕುಮಾರ್ ವಿಶ್ವಾಸ್ ಈ ಆರೋಪವನ್ನು ತಳ್ಳಿ ಹಾಕಿದ್ದರು. ಇದು ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರ. ಅಜಯ್ ವೋಹರಾ ಅವರಿಂದ ನನ್ನ ವಿರೋಧಿಗಳು ಈ ದೂರು ಕೊಡಿಸಿದ್ದಾರೆ ಎಂದು ಹೇಳಿದ್ದರು. ಆದರೆ, ತಾವು ಮಾಡುತ್ತಿರುವ ಆರೋಪಗಳಿಗೆ ಸಾಕ್ಷಿಗಳಿವೆ, ನಾನು ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಎಂದು ಸ್ಪಷ್ಟಪಡಿಸಿದ್ದರು.

English summary
The Commission for Women in New Delhi has summoned, Kumar Vishwas over a complaint of him having an illicit relationship with a party volunteer of the Aam Admi Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X