Breaking; ಪಾಟ್ನಾದಿಂದ ಲಾಲೂ ಏರ್‌ಲಿಫ್ಟ್‌, ದೆಹಲಿ ಏಮ್ಸ್‌ಗೆ ದಾಖಲು

ನವದೆಹಲಿ, ಜುಲೈ 07; ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‌ರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಟ್ನಾದ ಪರಾಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಬುಧವಾರ ಏರ್ ಲಿಫ್ಟ್ ಮೂಲಕ ದೆಹಲಿಗೆ ಕರೆತರಲಾಗಿದೆ.

ಲಾಲೂ ಪ್ರಸಾದ್ ಯಾದವ್ ಸೋಮವಾರ ಮುಂಜಾನೆ 3.30ರ ಸುಮಾರಿಗೆ ಪಾಟ್ನಾದಲ್ಲಿರುವ ಪರಾಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದರು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

74 ವರ್ಷದ ಲಾಲೂ ಪ್ರಸಾದ್ ಯಾದವ್ ಪಾಟ್ನಾದ ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಆಯತಪ್ಪಿ ಬಿದ್ದಿದ್ದರು. ಅವರ ಎಡಭುಜ ಸೇರಿದಂತೆ ಕೈ ಮತ್ತು ಕಾಲುಗಳಿಗೆ ಗಾಯವಾಗಿತ್ತು. ಚಿಕಿತ್ಸೆಗಾಗಿ ಪಾಟ್ನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Lalu Prasad Yadav Airlifted From Patna Admitted To AIIMS Delhi

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಲಾಲೂ ಪ್ರಸಾದ್ ಯಾದವ್‌ ಪುತ್ರನಿಗೆ ಕರೆ ಮಾಡಿ ಲಾಲೂ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು. ಬುಧವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗಾಗಿ ಲಾಲೂ ಪ್ರಸಾದ್ ಯಾದವ್‌ರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.

ಲಾಲೂ ಪ್ರಸಾದ್ ಯಾದವ್‌ ಪುತ್ರ ತೇಜಸ್ವಿ ಯಾದವ್, ಪತ್ನಿ ರಾಬ್ರಿ ದೇವಿ ಮತ್ತು ಹಿರಿಯ ಪುತ್ರಿ ಮಿಶಾ ಭಾರತಿ ಮತ್ತು ಪರಾಗ್ ಆಸ್ಪತ್ರೆಯಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಸಹ ಏಮ್ಸ್‌ಗೆ ಆಗಮಿಸಿದ್ದಾರೆ.

ವಿದೇಶದಲ್ಲಿ ನೆಲೆಸಿರುವ ಲಾಲೂ ಪ್ರಸಾದ್ ಯಾದವ್‌ ಪುತ್ರಿ ರೋಹಿಣಿ ಆಚಾರ್ಯ ಪಾಟ್ನಾದಲ್ಲಿರುವ ಪರಾಸ್ ಆಸ್ಪತ್ರೆಯಲ್ಲಿ ಲಾಲೂ ಚಿಕಿತ್ಸೆ ಪಡೆಯುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದ್ದರು. ತಂದೆ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದರು.

ಬುಧವಾರ ಪಾಟ್ನಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ತೇಜಸ್ವಿ ಯಾದವ್, "ತಂದೆಗೆ ಭುಜ ಸೇರಿದಂತೆ ಮೂರು ಕಡೆ ಫ್ಯಾಕ್ಚರ್ ಆಗಿದೆ. ಅವರು ಕೈ, ಕಾಲುಗಳನ್ನು ಸಹ ಅಲ್ಲಾಡಿಸಲು ಆಗದ ಸ್ಥಿತಿಯಲ್ಲಿದ್ದಾರೆ" ಎಂದು ಹೇಳಿದ್ದರು.

"ಲಾಲೂ ಪ್ರಸಾದ್ ಯಾದವ್‌ಗೆ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಪಕ್ಷದ ಕಾರ್ಯಕರ್ತರು ಆತಂಕಗೊಳ್ಳುವ ಅಗತ್ಯವಿಲ್ಲ. ಎಲ್ಲರೂ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ" ಎಂದು ತೇಜಸ್ವಿ ಯಾದವ್ ಮನವಿ ಮಾಡಿದ್ದಾರೆ.

ಪಾಟ್ನಾದ ಆಸ್ಪತ್ರೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಭೇಟಿ ನೀಡಿ ಲಾಲೂ ಪ್ರಸಾದ್ ಆರೋಗ್ಯ ವಿಚಾರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+