ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಮ್ಸ್ ಆಸ್ಪತ್ರೆಗೆ ದಾಖಲಾದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್

|
Google Oneindia Kannada News

ನವದೆಹಲಿ, ನವೆಂಬರ್ 27:ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇವು ಹಗರಣಕ್ಕೆ ಸಂಬಂಧಿಸಿದ ದುಮ್ಕಾ ಖಜಾನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಲಾಲೂ ಪ್ರಸಾದ್ ಜ್ವರ ಹಾಗೂ ದಣಿವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಸ್ಥಿತಿ ಗಂಭೀರವಾಗಿಲ್ಲದಿದ್ದರೂ ರಕ್ತ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

 ಮೇವು ಹಗರಣ; ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು ಮೇವು ಹಗರಣ; ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

73 ವರ್ಷ ವಯಸ್ಸಿನ ಲಾಲೂ ಪ್ರಸಾದ್ ಅವರ ವಿಡಿಯೋ ಈ ವಾರದ ಆರಂಭದಲ್ಲಿ ವೈರಲ್ ಆಗಿತ್ತು, ವಿಡಿಯೋದಲ್ಲಿ ಅವರು ಜೀಪಿನಲ್ಲಿ ಪಕ್ಷದ ಕಚೇರಿಗೆ ಹೋಗುತ್ತಿರುವುದನ್ನು ಕಾಣಬಹುದಾಗಿದೆ. 90ರ ದಶಕದ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಲು ಅವರು ಪಾಟ್ನಾಕ್ಕೆ ತೆರಳಿದ್ದರು.

Lalu Prasad Yadav, Down With Fever, Admitted To AIIMS

ಲಾಲೂ ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ ಹಾಗೂ ವಾಡಿಕೆಯ ಆರೋಗ್ಯ ತಪಾಸಣೆಗಾಗಿ ಈ ವರ್ಷದ ಆರಂಭದಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ಭೇಟಿ ನೀಡಿದ್ದರು.

ಲಾಲೂ ಪ್ರಸಾದ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚೈಬಾಸಾ ಖಜಾನೆಯಲ್ಲಿ 33.67 ಕೋಟಿ ಅವ್ಯವಹಾರ ಪ್ರಕರಣದ ಮೇಲೆ 2017ರಿಂದಲೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಈ ಬಹುಕೋಟಿ ಮೇವು ಹಗರಣದಲ್ಲಿ ನಾಲ್ಕು ಪ್ರಕರಣಗಳನ್ನು ಎದುರಿಸುತ್ತಿರುವ ಲಾಲೂ ಪ್ರಸಾದ್ ಅವರಿಗೆ ಮೂರು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿದೆ.ಲಾಲೂ ಪ್ರಸಾದ್ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ದೆಹಲಿಯ ಏಮ್ಸ್‌ಗೆ ಈ ಮೊದಲು ದಾಖಲಿಸಲಾಗಿತ್ತು.

ತಮ್ಮ ಶಿಕ್ಷೆಯ ಅವಧಿಯನ್ನು ಅರ್ಧ ಪೂರೈಸಿದ್ದು, ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿಯಲ್ಲಿ ಜಾಮೀನು ತಿರಸ್ಕರಿಸಲಾಗಿತ್ತು. ಬಳಿಕ ಜಾಮೀನು ದೊರೆತಿತ್ತು.

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲೂ ಯಾದವ್ ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಜನವರಿಯಲ್ಲಿ ದೆಹಲಿಗೆ ಸ್ಥಳಾಂತರಿಸಲಾಗಿತ್ತು.

English summary
Rashtriya Janata Party chief Lalu Prasad Yadav has been admitted to the All India Institute of Medical science (AIIMS) in New Delhi after he complained of fever, sources have informed news agency ANI.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X