ರಾಜ್ ಘಾಟ್ ನ ಮಹಾತ್ಮಾ ಸಮಾಧಿಗೆ ಗಣ್ಯರೆಲ್ಲರ ಪುಷ್ಪನಮನ
ನವದೆಹಲಿ, ಜನವರಿ 30: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 70 ನೇ ಪುಣ್ಯತಿಥಿಯ ಅಂಗವಾಗಿ ನವದೆಹಲಿಯ ರಾಜ್ ಘಾಟ್ ನಲ್ಲಿರುವ ಬಾಪೂ ಸಮಾಧಿಗೆ ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಗಣ್ಯರೆಲ್ಲ ರಾಷ್ಟ್ರಪಿತನಿಗೆ ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್
ಅವರು ಈಗಾಗಲೇ ಟ್ವಿಟ್ಟರ್ ನಲ್ಲಿ ಹುತಾತ್ಮರ ದಿನ ಸ್ಮರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದ, ಮಡಿದ ಎಲ್ಲರಿಗೂ ನಮನ ಸಲ್ಲಿಸಿದ್ದಾರೆ.













Click it and Unblock the Notifications