ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರ್ಭಯ ಪ್ರಕರಣ; ಗಲ್ಲು ತಪ್ಪಿಸಿಕೊಳ್ಳಲು ನಡುರಾತ್ರಿ ಹೈಡ್ರಾಮ

|
Google Oneindia Kannada News

ನವದೆಹಲಿ, ಮಾರ್ಚ್ 20 : ಗಲ್ಲು ಕುಣಿಕೆ ತಪ್ಪಿಸಿಕೊಳ್ಳಲು ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ನಡುರಾತ್ರಿ ಹೈಡ್ರಾಮ ಮಾಡಿದರು. ಅಂತಿಮವಾಗಿ ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು.

Recommended Video

Nirbhaya’s Mother Asha Devi dedicated the day to all the daughters of the country.

ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ರಾತ್ರಿ 11.20ಕ್ಕೆ ವಜಾಗೊಳಿಸಿತು. ಬಳಿಕ ಅಪರಾಧಿಗಳ ಪರ ವಕೀಲರು ಸುಪ್ರೀಂಕೋರ್ಟ್ ಮೊರೆ ಹೋದರು.

ನಿರ್ಭಯ ಅಪರಾಧಿಗಳ ತುರ್ತು ಅರ್ಜಿ ವಜಾ; ಗಲ್ಲು ಖಾಯಂ ನಿರ್ಭಯ ಅಪರಾಧಿಗಳ ತುರ್ತು ಅರ್ಜಿ ವಜಾ; ಗಲ್ಲು ಖಾಯಂ

ನಡುರಾತ್ರಿ 1 ಗಂಟೆ ಸುಮಾರಿಗೆ ಅರ್ಜಿಯ ವಿಚಾರಣೆಯನ್ನು ಆರ್. ಭಾನುಮತಿ ನೇತೃತ್ವದ ಪೀಠ ಕೈಗೆತ್ತಿಕೊಂಡಿತು. 3.30ರ ಸುಮಾರಿಗೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು. 5.30ಕ್ಕೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಯಿತು.

ನಿರ್ಭಯ ಹಂತಕರಿಗೆ ಗಲ್ಲು; ದೆಹಲಿ ಹೈಕೋರ್ಟ್‌ಗೆ ತುರ್ತು ಅರ್ಜಿ ನಿರ್ಭಯ ಹಂತಕರಿಗೆ ಗಲ್ಲು; ದೆಹಲಿ ಹೈಕೋರ್ಟ್‌ಗೆ ತುರ್ತು ಅರ್ಜಿ

Nirbhaya Convicts

ನಿರ್ಭಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ (31) ಅಪರಾಧಿಗಳು. ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಅಪರಾಧಿಗಳ ಪರ ವಕೀಲರು ನಡುರಾತ್ರಿ ಹೈಡ್ರಾಮ ನಡೆಸಿದರು.

ಎಲ್ಲಾ ಅರ್ಜಿ ತಿರಸ್ಕೃತ; ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಖಚಿತ ಎಲ್ಲಾ ಅರ್ಜಿ ತಿರಸ್ಕೃತ; ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಖಚಿತ

ತಾನು ಬಾಲಾಪರಾಧಿ ಎಂದು, ರಾಷ್ಟ್ರಪತಿಗಳು ತನ್ನ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದ್ದಕ್ಕೆ ನಿಖರ ಕಾರಣ ನೀಡಿಲ್ಲ ಎಂಬ ಅಂಶವನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಯಿತು. ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಮನವಿ ಮಾಡಲಾಯಿತು.

ಆರ್. ಭಾನುಮತಿ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ರಾಷ್ಟ್ರಪತಿಗಳ ತೀರ್ಮಾನವನ್ನು ಪುನರ್ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿತು. ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡುವುದಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿತು.

2012ರ ಡಿಸೆಂಬರ್ 16ರಂದು 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಚಲಿಸುವ ಬಸ್‌ನಲ್ಲಿ ಅತ್ಯಾಚಾರ ನಡೆಸಿ, ಆಕೆಯ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಲಾಗಿತ್ತು. ಡಿಸೆಂಬರ್ 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಳು.

ಪ್ರಕರಣದ ನಡೆದು ಏಳು ವರ್ಷಗಳ ಬಳಿಕ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಒಟ್ಟು 6 ಅಪರಾಧಿಗಳು. ಆದರೆ, ಬಾಲಾಪರಾಧಿ ಎಂಬ ಕಾರಣಕ್ಕೆ ಒಬ್ಬ ಬಿಡುಗಡೆಗೊಂಡಿದ್ದಾನೆ. ಮತ್ತೊಬ್ಬ ಆರೋಪಿ ರಾಮ್ ಸಿಂಗ್ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.

English summary
Midnight legal drama by the Nirbhaya convicts come to the end aftter three judge bench of the Supreme Court dismissed the last desperate appeal on March 20th early morning hours before execution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X