ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ 100 ಐಸಿಯು ಹಾಸಿಗೆಗಳು ಮಾತ್ರ ಖಾಲಿ ಇವೆ: ಕೇಜ್ರಿವಾಲ್

|
Google Oneindia Kannada News

ನವದೆಹಲಿ, ಏಪ್ರಿಲ್ 18: ದೆಹಲಿಯಲ್ಲಿ ಕೇವಲ 100 ಐಸಿಯು ಹಾಸಿಗೆಗಳು ಮಾತ್ರ ಖಾಲಿ ಇದ್ದು, ಪರಿಸ್ಥಿತಿ ಚಿಂತಾಜನಕವಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಮೀಸಲಿಡಿ ಎಂದು ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕಳೆದ 24 ಗಂಟೆಗಳಲ್ಲಿ ಮಾತನಾಡಿ ಪರಿಸ್ಥಿತಿಯನ್ನು ವಿವರಿಸಿದ್ದೇನೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ.

ಕೊರೊನಾ ಕಾಟ: ತಮಿಳುನಾಡಿನಲ್ಲಿ ಲಾಕ್‌ಡೌನ್ ಹೊರತಾಗಿ ಹೊಸ ನಿರ್ಬಂಧಕೊರೊನಾ ಕಾಟ: ತಮಿಳುನಾಡಿನಲ್ಲಿ ಲಾಕ್‌ಡೌನ್ ಹೊರತಾಗಿ ಹೊಸ ನಿರ್ಬಂಧ

ಮಿತಿಮೀರುತ್ತಿರುವ ಸೋಂಕಿತರಿಂದಾಗಿ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದು, ಜನರಿಗೆ ಚಿಕಿತ್ಸಾ ಸೌಲಭ್ಯ ನೀಡಲು ಕೇಂದ್ರ ಸರ್ಕಾರದ ನೆರವನ್ನು ಸಹ ಇದೇ ಸಂದರ್ಭದಲ್ಲಿ ಕೇಜ್ರಿವಾಲ್ ಕೇಳಿದ್ದಾರೆ. ಕೇವಲ ಒಂದೇ ದಿನದಲ್ಲಿ ದೆಹಲಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಶೇ. 24ರಿಂದ ಶೇ. 30ಕ್ಕೆ ಏರಿಕೆಯಾಗಿದೆ.

Less Than 100 ICU Beds Vacant In Delhi Hospitals,Situation Worsening: Kejriwal

ಪರಿಸ್ಥಿತಿಗೆ ತಕ್ಕಂತೆ ಮುಂದಿನ ಎರಡು-ಮೂರು ದಿನಗಳಲ್ಲಿ ಯಮುನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್, ರಾಧಾ ಸ್ವಾಮಿ ಸತ್ಸಂಗ ಆವರಣ ಮತ್ತು ಶಾಲೆಗಳಲ್ಲಿ 6 ಸಾವಿರ ಬೆಡ್ ಗಳನ್ನು ಸ್ಥಾಪಿಸಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಿನ್ನೆ ಒಂದೇ ದಿನ 24 ಸಾವಿರ ಹೊಸ ಕೊರೊನಾ ಕೇಸುಗಳು ವರದಿಯಾಗಿವೆ.

ಆಸ್ಪತ್ರೆಗಳಲ್ಲಿ ಬೆಡ್ ಗಳು ಬಹಳ ಬೇಗನೆ ಭರ್ತಿಯಾಗುತ್ತಿವೆ. ಐಸಿಯು ಬೆಡ್ ಗಳಿಗೆ ಕೊರತೆಯಿದೆ, ಆಕ್ಸಿಜನ್ ಪೂರೈಕೆ ಕೂಡ ಕುಂಠಿತವಾಗುತ್ತಿದೆ. ಈ ಬಗ್ಗೆ ನಿರಂತರವಾಗಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುತ್ತಿದ್ದೇನೆ.

ನಮಗೆ ಈಗ ಹೆಚ್ಚಿನ ಬೆಡ್ ಗಳು ಬೇಕಾಗಿದೆ, ಕೇಂದ್ರ ಸರ್ಕಾರದ ಆಸ್ಪತ್ರೆಗಳಲ್ಲಿ 7 ಸಾವಿರ ಬೆಡ್ ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡುವಂತೆ ಕೇಳಿದ್ದೇನೆ ಎಂದು ದೆಹಲಿಯ ವಸ್ತುಸ್ಥಿತಿಯನ್ನು ಅರವಿಂದ್ ಕೇಜ್ರಿವಾಲ್ ವಿವರಿಸಿದ್ದಾರೆ.

ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯುಂಟಾಗುತ್ತಿದೆ, ದೆಹಲಿ ಸರ್ಕಾರ 6 ಸಾವಿರ ಅಧಿಕ ಆಕ್ಸಿಜನ್ ಪೂರೈಕೆಯ ಬೆಡ್ ಗಳನ್ನು ಒದಗಿಸುತ್ತಿದ್ದು ಐಸಿಯು ಹಾಸಿಗೆಗಳಿಗಿಂತ ವಿಭಿನ್ನವಾಗಿದೆ. ನಗರದಲ್ಲಿ ಮುಂದಿನ ದಿನಗಳಲ್ಲಿ ಇದು ಹೆಚ್ಚಿನ ಬೇಡಿಕೆಯಾಗಬಹುದು ಎಂದು ಹೇಳಿದ್ದಾರೆ.

English summary
Chief Minister Arvind Kejriwal on Sunday said around 25,500 new COVID-19 cases have been reported in Delhi and the positivity rate has increased to nearly 30 per cent in the last 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X